Recent Posts

Thursday, August 20, 2026
ಉಡುಪಿಜಿಲ್ಲೆಸುದ್ದಿ

ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್‌ಗೆ ಬೆಂಕಿ; 7 ಪ್ರಯಾಣಿಕರು ಪಾರು- ಕಹಳೆ ನ್ಯೂಸ್

ಉಡುಪಿ: ಬ್ರಹ್ಮಾವರ ಸಮೀಪ ಖಾಸಗಿ ಬಸ್‌ಗೆ ಬೆಂಕಿ ಹೊತ್ತಿಕೊಂಡ ಘಟನೆ ಸಂಭವಿಸಿದ್ದು, ಬಸ್‌ನಲ್ಲಿದ್ದ ಏಳು ಪ್ರಯಾಣಿಕರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಜಾಹೀರಾತು

ಉಡುಪಿಯಿಂದ ಸಾಗರದತ್ತ ತೆರಳುತ್ತಿದ್ದ ಖಾಸಗಿ ಬಸ್‌ನಲ್ಲಿ ಏಕಾಏಕಿ ಹೊಗೆ ಕಾಣಿಸಿಕೊಂಡಿದೆ. ಬಳಿಕ ಬಸ್‌ನ ಎಲೆಕ್ಟ್ರಿಕಲ್ ಬಾಕ್ಸ್   ಭಾಗದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕೆಲವೇ ಕ್ಷಣಗಳಲ್ಲಿ ಬೆಂಕಿ ವ್ಯಾಪಿಸಲು ಆರಂಭಿಸಿದೆ

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಪರಿಸ್ಥಿತಿಯ ಗಂಭೀರತೆಯನ್ನು ಅರಿತ ಬಸ್ ನಿರ್ವಾಹಕರು ತಕ್ಷಣ ಸಮಯಪ್ರಜ್ಞೆ ಮೆರೆದು ಬಸ್ ನಿಲ್ಲಿಸಿ ಎಲ್ಲಾ ಪ್ರಯಾಣಿಕರನ್ನು ಸುರಕ್ಷಿತವಾಗಿ ಕೆಳಗಿಳಿಸಿದ್ದಾನೆ. ನಿರ್ವಾಹಕನ ತ್ವರಿತ ಕ್ರಮದಿಂದ ಸಂಭವಿಸಬಹುದಾಗಿದ್ದ ದೊಡ್ಡ ದುರಂತ ತಪ್ಪಿದೆ.

ಬೆಂಕಿ ಕಾಣಿಸಿಕೊಂಡ ವಿಷಯ ತಿಳಿಯುತ್ತಿದ್ದಂತೆಯೇ ಉಡುಪಿ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದಾರೆ. ಬಳಿಕ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.