
ನವದೆಹಲಿ: 10 ಲಕ್ಷ ರೂ. ಲಂಚ ಪಡೆದ ಆರೋಪದಲ್ಲಿ ಕೇಂದ್ರ ಸಚಿವಾಲಯದ ಹಣಕಾಸು ಸಲಹೆಗಾರನನ್ನು ಸಿಬಿಐ ಬಂಧಿಸಿದೆ.
ಭಾರತೀಯ ನಾಗರಿಕ ಲೆಕ್ಕಪತ್ರ ಸೇವೆಯ 2020 ರ ಬ್ಯಾಚ್‌ನ ಅಧಿಕಾರಿಯಾಗಿರುವ ಸಂದೀಪ್ ಬಂಧಿತ ಆರೋಪಿ. ಇವರು ನವೀಕರಣ ಕಡತವನ್ನು ಪ್ರಕ್ರಿಯೆಗೊಳಿಸಲು ಉದ್ಯಮಿಯೊಬ್ಬರಿಂದ 15 ಲಕ್ಷ ರೂ. ಲಂಚ ಪಡೆದಿದ್ದಾರೆಂದು ಆರೋಪಿಸಲಾಗಿದೆ.
ಖಾಸಗಿ ಕಂಪನಿಯ ನವೀಕರಣ ಫೈಲ್ ಅನ್ನು ತೆರವುಗೊಳಿಸಲು ತಮ್ಮ ಪತ್ನಿ ಮೂಲಕ 10 ಲಕ್ಷ ರೂ. ಲಂಚ ಪಡೆದ ಆರೋಪದ ಮೇಲೆ ಅವರನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ.











