ಶಿಕ್ಷಣ ದಿನಾಚರಣೆ ಪ್ರಯುಕ್ತ ರಾಧಾಕೃಷ್ಣ ಕಲ್ಚಾರ್ ಅವರಿಗೆ ಸನ್ಮಾನ : ಎಡನೀರು ಶ್ರೀ ಚಾತುರ್ಮಾಸ್ಯ ಸಾಂಸ್ಕೃತಿಕ ವೇದಿಕೆಯಲ್ಲಿ ವಿಶೇಷ ತಾಳಮದ್ದಳೆ – ಕಹಳೆ ನ್ಯೂಸ್

ಬೆಂಗಳೂರು: ಯಕ್ಷಮಿತ್ರರು – ಬೆಂಗಳೂರು (ರಿ.) ಟ್ರಸ್ಟ್ ವತಿಯಿಂದ ಶಿಕ್ಷಣ ದಿನಾಚರಣೆ ಪ್ರಯುಕ್ತ ಸೆ.5. 2026ರಂದು ವಿಶೇಷ ಯಕ್ಷಗಾನ ತಾಳಮದ್ದಳೆ ಹಾಗೂ ಶಿಕ್ಷಕರ ಸನ್ಮಾನ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ಜಗದ್ಗುರು ಶ್ರೀ ಶಂಕರಾಚಾರ್ಯ ಸಂಸ್ಥಾನ ಶ್ರೀ ಎಡನೀರು ಮಠದ ಪರಮಪೂಜ್ಯ ಶ್ರೀ ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದಂಗಳವರ 6ನೇ ಚಾತುರ್ಮಾಸ್ಯ ವ್ರತಾಚರಣೆಯ ಅಂಗವಾಗಿ ನಡೆಯುತ್ತಿರುವ ಸಾಂಸ್ಕೃತಿಕ ಕಾರ್ಯಕ್ರಮಗಳ ವೇದಿಕೆಯಲ್ಲಿ ಈ ವಿಶೇಷ ಕಾರ್ಯಕ್ರಮ ಜರುಗಲಿದೆ.
ಕಾರ್ಯಕ್ರಮದಲ್ಲಿ ಯಕ್ಷಗಾನ ತಾಳಮದ್ದಳೆ ಕ್ಷೇತ್ರದ ಹಿರಿಯ ಕಲಾವಿದ, ಉಪನ್ಯಾಸಕ ಹಾಗೂ ಅಂಕಣಕಾರ ರಾಧಾಕೃಷ್ಣ ಕಲ್ಚಾರ್ ಅವರನ್ನು ವಿಶೇಷವಾಗಿ ಸನ್ಮಾನಿಸಿ ಗೌರವಿಸಲಾಗುವುದು.
ಮುಖ ಅತಿಥಿಯಾಗಿ ಶ್ರೀ ಪ್ರಮೋದ್ ಮಧ್ವರಾಜ್ ಭಾಗವಹಿಸುವರು
ಸೆಪ್ಟೆಂಬರ್ 5ರಂದು ಸಂಜೆ 6 ಗಂಟೆಯಿಂದ ರಾತ್ರಿ 10 ಗಂಟೆಯವರೆಗೆ ನಡೆಯಲಿರುವ ಕಾರ್ಯಕ್ರಮದಲ್ಲಿ ಕನ್ನಡ ಯಕ್ಷಗಾನ ತಾಳಮದ್ದಳೆಯೊಂದಿಗೆ ಶಿಕ್ಷಕರ ಸನ್ಮಾನ ಕಾರ್ಯಕ್ರಮಗಳು ನಡೆಯಲಿವೆ.
ಶಿಕ್ಷಣ, ಕಲೆ ಮತ್ತು ಸಂಸ್ಕೃತಿಯ ಮಹತ್ವವನ್ನು ಸಾರುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಯಕ್ಷಗಾನಾಭಿಮಾನಿಗಳು, ಶಿಕ್ಷಕರು, ಕಲಾಸಕ್ತರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಯಕ್ಷಮಿತ್ರರು – ಬೆಂಗಳೂರು (ರಿ.) ಟ್ರಸ್ಟ್‌ನ ಕಾರ್ಯದರ್ಶಿ ಶ್ರೀ ಶ್ಯಾಮ ಸೂರ್ಯ ಎಂ. ತಿಳಿಸಿದ್ದಾರೆ.
ಸಂಪರ್ಕ:
ಯಕ್ಷಮಿತ್ರರು – ಬೆಂಗಳೂರು ಟ್ರಸ್ಟ್ (ರಿ.)
📞 +91 6363 101 650 | +91 94826 01996











