ಕಲ್ಲಡ್ಕ ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯ ವೇದವ್ಯಾಸ ಧ್ಯಾನಮಂದಿರದಲ್ಲಿ ಪ್ರಾಥಮಿಕ ಶಾಲೆಯ ಪ್ರಸ್ತುತ ಶೈಕ್ಷಣಿಕ ವರ್ಷದ ಶಾಲಾಭಿವೃದ್ಧಿ ಸಮಿತಿ ಸಭೆ : ನೂತನ ಪದಾಧಿಕಾರಿಗಳನ್ನು ಆಯ್ಕೆ – ಕಹಳೆ ನ್ಯೂಸ್

ಕಲ್ಲಡ್ಕ ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯ ವೇದವ್ಯಾಸ ಧ್ಯಾನಮಂದಿರದಲ್ಲಿ ಪ್ರಾಥಮಿಕ ಶಾಲೆಯ ಪ್ರಸ್ತುತ ಶೈಕ್ಷಣಿಕ ವರ್ಷದ ಶಾಲಾಭಿವೃದ್ಧಿ ಸಮಿತಿ ಸಭೆ ನಡೆಯಿತು.
ಈ ಸಭೆಯಲ್ಲಿ ಸಮಿತಿಗೆ ನೂತನ ಸದಸ್ಯರನ್ನು ಸೇರ್ಪಡೆಗೊಳಿಸಿ, ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾಗಿ ಚಂದ್ರಶೇಖರ ಸಾಲ್ಯಾನ್, ಉಪಾಧ್ಯಕ್ಷರು ಗುರುಸಿದ್ದಯ್ಯ ಹಿರೇಮಠ, ಕಾರ್ಯದರ್ಶಿ ನಾಗರಾಜ ಕಲ್ಲಡ್ಕ, ಸಹ ಕಾರ್ಯದರ್ಶಿ ಗಂಗಾಧರ ಗೌಡ ಮಾಣಿ ಆಯ್ಕೆ ಮಾಡಲಾಯಿತು.
ಹಾಗೆಯೇ ಸಂಸ್ಥೆಯ ಸಂಚಾಲಕರು ವಸಂತ ಮಾಧವ ಶ್ರೀಮಾನ್ ಸಭೆಯ ಉದ್ದೇಶವನ್ನು ಪ್ರಸ್ತಾವನಗೈದರು , ಸಮಿತಿಯ ಸದಸ್ಯರು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು.
ನಂತರ ಸಂಸ್ಥೆಯ ಸಂಸ್ಥಾಪಕರು ಡಾ. ಪ್ರಭಾಕರ್ ಭಟ್ ಕಲ್ಲಡ್ಕ ಶೈಕ್ಷಣಿಕ ಪ್ರಗತಿಯ ಕುರಿತು ಮಾರ್ಗದರ್ಶನವನ್ನು ಮಾಡಿದರು. ಈ ಸಭೆಯಲ್ಲಿ ಶ್ರೀರಾಮ ವಿದ್ಯಾಕೇಂದ್ರದ ಕಾರ್ಯನಿರ್ವಹಣಾಧಿಕಾರಿ ಕೃಷ್ಣಪ್ರಸಾದ್ ಕಾಯರ್ ಕಟ್ಟೆ, ಸಹ ಕಾರ್ಯನಿರ್ವಹಣಾಧಿಕಾರಿ ರವಿರಾಜ್ ಕಣಂತೂರು , ಸಹ ಮುಖ್ಯೋಪಾಧ್ಯಾಯರು ಸುಮಂತ್ ಆಳ್ವ , ಸಮಿತಿ ಸದಸ್ಯರು, ಆಡಳಿತ ಮಂಡಳಿ ಸದಸ್ಯರು ಹಾಗೂ ಸಮಿತಿಯನ್ನು ಗಮನಿಸುವ ಅಧ್ಯಾಪಕರು ಉಪಸ್ಥಿತರಿದ್ದರು.











