Friday, August 21, 2026
ಸುದ್ದಿ

ಹಿರಿಯ ನಟಿ, ಪದ್ಮಶ್ರೀ ಪುರಸ್ಕೃತೆ ಸಾಹುಕಾರ್ ಜಾನಕಿ ಇನ್ನಿಲ್ಲ – ಕಹಳೆ ನ್ಯೂಸ್

ಚೆನ್ನೈ: ದಕ್ಷಿಣ ಭಾರತೀಯ ಚಿತ್ರರಂಗದ ಹಿರಿಯ ಮತ್ತು ಬಹುಭಾಷಾ ತಾರೆ, ಪದ್ಮಶ್ರೀ ಪುರಸ್ಕೃತೆ ಸಾಹುಕಾರ್ ಜಾನಕಿ  ಅವರು ಇಂದು ನಿಧನರಾಗಿದ್ದಾರೆ.

ಜಾಹೀರಾತು

ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದ ಅವರು ಇಂದು ಚೆನ್ನೈನ ಆಸ್ಪತ್ರೆಯಲ್ಲಿ ಮಧ್ಯಾಹ್ನ 1:59ಕ್ಕೆ ವಿಧಿವಶರಾದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಏಳು ದಶಕಗಳ ಕಾಲ ಭಾರತೀಯ ಚಿತ್ರರಂಗದಲ್ಲಿ ಸಕ್ರಿಯರಾಗಿದ್ದ ಸಾಹುಕಾರ್ ಜಾನಕಿ(94) ಅವರು ಕನ್ನಡ, ತಮಿಳು, ತೆಲುಗು ಮತ್ತು ಮಲಯಾಳಂ ಭಾಷೆಗಳಲ್ಲಿ ಬರೋಬ್ಬರಿ 400ಕ್ಕೂ ಹೆಚ್ಚು ಚಲನಚಿತ್ರಗಳಲ್ಲಿ ಅಭಿನಯಿಸಿ ಸೈ ಎನಿಸಿಕೊಂಡಿದ್ದರು. ತಮ್ಮ ನಟನಾ ಸಾಮರ್ಥ್ಯದಿಂದ ಚಿತ್ರರಂಗದಲ್ಲಿ ಅಪಾರ ಗೌರವ ಮತ್ತು ಅಭಿಮಾನಿಗಳನ್ನು ಸಂಪಾದಿಸಿದ್ದರು.

ಭಾರತೀಯ ಕಲೆ ಮತ್ತು ಚಿತ್ರರಂಗಕ್ಕೆ ಅವರು ನೀಡಿದ ಜೀವಮಾನದ ಕೊಡುಗೆಯನ್ನು ಪರಿಗಣಿಸಿ, ಭಾರತ ಸರ್ಕಾರವು ಅವರಿಗೆ 2022ರಲ್ಲಿ ದೇಶದ ಪ್ರತಿಷ್ಠಿತ ‘ಪದ್ಮಶ್ರೀ’ ಪ್ರಶಸ್ತಿಯನ್ನು ನೀಡಿ ಗೌರವಿಸಿತ್ತು.

ದಿವಂಗತ ಶಂಕರಮಂಚಿ ಶ್ರೀನಿವಾಸ ರಾವ್ ಅವರನ್ನು ಮದುವೆಯಾಗಿದ್ದ ಸಾಹುಕಾರ್ ಜಾನಕಿ ಅವರು ಮಕ್ಕಳಾದ ಯಜ್ಞಪ್ರಭಾ ಕೋಟಿ, ವೆಂಕಟರಮಣ ಶಂಕರಮಂಚಿ, ಸಾಚಿ ರಾವ್ ಅವರನ್ನು ಅಗಲಿದ್ದಾರೆ.

ಸಾಹುಕಾರ್ ಜಾನಕಿ ನಿಧನಕ್ಕೆ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಚಿತ್ರರಂಗದ ಗಣ್ಯರು, ಅಭಿಮಾನಿಗಳು ಹಾಗೂ ವಿವಿಧ ಕ್ಷೇತ್ರಗಳ ಪ್ರಮುಖರು ತೀವ್ರ ಸಂತಾಪ ಸೂಚಿಸಿದ್ದಾರೆ.

ಸಾಹುಕಾರ್‌ ಜಾನಕಿ ಅವರು ಕನ್ನಡದ ಹಲವು ಸಿನಿಮಾಗಳಲ್ಲೂ ನಟಿಸಿದ್ದಾರೆ. ಡಾ.ರಾಜ್‌ಕುಮಾರ್‌ ನಟನೆಯ ಶಬ್ಧವೇದಿ ಮತ್ತು ಪುನೀತ್‌ರಾಜ್‌ಕುಮಾರ್‌ ನಟನೆಯ ಅಭಿ ಸಿನಿಮಾದಲ್ಲಿ ಪೋಷಕ ನಟಿಯಾಗಿ ನಟಿಸಿ ಜನಮನಗೆದ್ದಿದ್ದರು.