Monday, August 24, 2026
ಬೆಂಗಳೂರುಸುದ್ದಿ

ನಕಲಿ ಔಷಧ ಜಾಲದ ಕಿಂಗ್‌ಪಿನ್‌ ವಿದೇಶದಲ್ಲಿ ಲಾಕ್! – ಕಹಳೆ ನ್ಯೂಸ್

ಬೆಂಗಳೂರು: ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ನಕಲಿ ಹಾಗೂ ಕಳಪೆ ಔಷಧ ಮಾರಾಟ ಜಾಲಕ್ಕೆ ಅಂತಾರಾಷ್ಟ್ರೀಯ ನಂಟು ಇರುವುದು ಬಯಲಾಗಿದ್ದು, ಪ್ರಕರಣದ ಪ್ರಮುಖ ರೂವಾರಿ ನಾಗರಬಾವಿಯ ಪ್ರಶಾಂತ್ ಹಾಗೂ ಆತನ ಇಬ್ಬರು ಸಹಚರರು ಪಶ್ಚಿಮ ಏಷ್ಯಾದ ದೇಶವೊಂದರ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ.

ಜಾಹೀರಾತು

ಪಶ್ಚಿಮ ಏಷ್ಯಾದ ದೇಶದಲ್ಲಿ ಕ್ಯಾನ್ಸರ್ ಸೇರಿದಂತೆ ಗಂಭೀರ ಕಾಯಿಲೆಗಳ ಔಷಧಗಳು ಅತ್ಯಂತ ಕಡಿಮೆ ಬೆಲೆಗೆ ದೊರೆಯುತ್ತವೆ. ಈ ಹಿನ್ನೆಲೆಯಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಔಷಧಗಳನ್ನು ಅಕ್ರಮವಾಗಿ ಭಾರತಕ್ಕೆ ಸಾಗಿಸಲು ಪ್ರಶಾಂತ್ ತನ್ನ ಇಬ್ಬರು ಸಹಚರರ ಮೂಲಕ ಸ್ಕೆಚ್ ಹಾಕಿದ್ದ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು