
ಕೆವಿಜಿ ಮಾತೃ ಸಂಸ್ಥೆ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ದಿವಂಗತ ಜಾನಕಿ ವೆಂಕಟರಮಣ ಗೌಡರವರ 14ನೇ ವರ್ಷದ ಪುಣ್ಯಸ್ಮರಣೆ ಕಾರ್ಯಕ್ರಮ ಅಗಸ್ಟ್ 22 ಶನಿವಾರದಂದು ನೆರವೇರಿತು.
ನೆಹರೂ ಮೆಮೋರಿಯಲ್ ಕಾಲೇಜಿನ ಪ್ರಾಂಶುಪಾಲರಾದ ಡಾ. ರುದ್ರಕುಮಾರ್ ಎಂ. ಎಂ ದಿವಂಗತರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಪೂಜ್ಯರನ್ನು ಸ್ಮರಿಸಿಕೊಂಡರು.
ಈ ಸಂದರ್ಭದಲ್ಲಿ ನೆಹರೂ ಮೆಮೋರಿಯಲ್ ಕಾಲೇಜಿನ ಐ.ಕ್ಯೂ.ಎ.ಸಿ ಸಂಯೋಜಕಿ ಡಾ. ಮಮತಾ ಕೆ, ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಮಿಥಾಲಿ ಪಿ ರೈ, ಮತ್ತು ಪದವಿ ಹಾಗೂ ಪದವಿ ಪೂರ್ವ ಕಾಲೇಜಿನ ಭೋದಕ ಭೋದಕೇತರ ವೃಂದದವರು ಉಪಸ್ಥಿತರಿದ್ದರು. ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥೆ ಡಾ. ಅನುರಾಧ ಕುರುಂಜಿ ನಿರೂಪಿಸಿ ವಂದಿಸಿದರು.











