Monday, August 24, 2026
ಸುದ್ದಿ

ದೇವಿಮನೆ ಘಾಟ್‌ನಲ್ಲಿ ಮತ್ತೆ ಗುಡ್ಡ ಕುಸಿತ – ಕಹಳೆ ನ್ಯೂಸ್

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ವ್ಯಾಪ್ತಿಗೆ ಬರುವ ರಾಷ್ಟ್ರೀಯ ಹೆದ್ದಾರಿ 766 ರ ದೇವಿಮನೆ ಘಾಟ್‌ ಪ್ರದೇಶದಲ್ಲಿ ಭಾರಿ ಮಳೆಯಿಂದಾಗಿ  ಮತ್ತೆ ಗುಡ್ಡ ಕುಸಿದ ಘಟನೆ ನಡೆದಿದೆ.

ಜಾಹೀರಾತು

ರಾತ್ರಿಯಿಂದ ಮುಂಜಾನೆಯವರೆಗೆ ಎಡೆಬಿಡದೆ ಸುರಿದ ಧಾರಾಕಾರ ಮಳೆಗೆ ಹೆದ್ದಾರಿಯ ಒಂದು ಬದಿಯ ಗುಡ್ಡದ ಮಣ್ಣು ರಸ್ತೆಗೆ ಕುಸಿದುಬಿದ್ದಿದೆ. ಪರಿಣಾಮವಾಗಿ ವಾಹನ ಸವಾರರಲ್ಲಿ ಆತಂಕ ಮನೆಮಾಡಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಕೆಲವು ತಿಂಗಳ ಹಿಂದೆಯಷ್ಟೇ ಇದೇ ದೇವಿಮನೆ ಘಟ್ಟ ಪ್ರದೇಶದಲ್ಲಿ ಭಾರಿ ಭೂಕುಸಿತ ಸಂಭವಿಸಿ ಹೆದ್ದಾರಿ ಸಂಚಾರ ಸಂಪೂರ್ಣ ಅಸ್ತವ್ಯಸ್ತಗೊಂಡಿತ್ತು. ಇದೀಗ ಮುಂಗಾರು ಮಳೆ ಚುರುಕಾಗುತ್ತಿದ್ದಂತೆ ಘಟ್ಟದ ಭಾಗದಲ್ಲಿ ಮತ್ತೆ ಸರಣಿ ಭೂಕುಸಿತಗಳು ಆರಂಭವಾಗಿದ್ದು, ಸಂಚಾರಕ್ಕೆ ಅಡ್ಡಿಯಾಗುವ ಭೀತಿ ಎದುರಾಗಿದೆ.

ಸ್ಥಳೀಯ ಆಡಳಿತ ಹಾಗೂ ಹೆದ್ದಾರಿ ಪ್ರಾಧಿಕಾರದ ಸಿಬ್ಬಂದಿ ರಸ್ತೆಗೆ ಬಿದ್ದ ಮಣ್ಣನ್ನು ತೆರವುಗೊಳಿಸಲು ಮುಂದಾಗಿದ್ದು, ವಾಹನ ಸವಾರರು ಎಚ್ಚರಿಕೆಯಿಂದ ಸಂಚರಿಸುವಂತೆ ಸೂಚಿಸಲಾಗಿದೆ.