Monday, August 24, 2026
ಸುದ್ದಿ

ವರ್ಷಕ್ಕೆ ಮೂರು ಸಿಲಿಂಡರ್ ಉಚಿತ : ತಮಿಳುನಾಡು ಜನರಿಗೆ ವಿಜಯ್‌ ಸರ್ಕಾರದ ಬಂಪರ್‌ ಆಫರ್‌ – ಕಹಳೆ ನ್ಯೂಸ್

ಚೆನ್ನೈ: ತಮಿಳುನಾಡು ಜನರಿಗೆ ವರ್ಷಕ್ಕೆ ಮೂರು ಎಲ್‌ಪಿಜಿ ಸಿಲಿಂಡರ್ ಉಚಿತವಾಗಿ ನೀಡಲು ಸಿಎಂ ವಿಜಯ್‌ ಸರ್ಕಾರ ಮುಂದಾಗಿದೆ.

ಜಾಹೀರಾತು

ʻಅನ್ನಪೂರ್ಣಿ ಸೂಪರ್ ಸಿಕ್ಸ್‌ʼ ಹೆಸರಿನಲ್ಲಿ ತಮಿಳುನಾಡು ಸರ್ಕಾರ ಈ ಯೋಜನೆ ಘೋಷಿಸಿದೆ. ವಾರ್ಷಿಕ 2.5 ಲಕ್ಷ ರೂ.ಗಿಂತ ಕಡಿಮೆ ಆದಾಯ ಇರುವ ಕುಟುಂಬಗಳಿಗೆ ಈ ಯೋಜನೆ ಅನ್ವಯ ಆಗಲಿದೆ. ಈ ಯೋಜನೆಯಿಂದ 1.30 ಕೋಟಿ ಕುಟುಂಬಗಳಿಗೆ ಸಹಾಯವಾಗಲಿದೆ. ಅಂದಾಜು 4000 ಕೋಟಿ ರೂ. ಹಣ ಈ ಯೋಜನೆಗೆ ಬಳಕೆಯಾಗಲಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಯೋಜನೆ ಬಗ್ಗೆ ವಿಧಾನಸಭೆಯಲ್ಲಿ ಮಾತನಾಡಿದ ಮುಖ್ಯಮಂತ್ರಿ ವಿಜಯ್‌, ಈ ಯೋಜನೆಯು ವಾರ್ಷಿಕ ಆದಾಯ 2.5 ಲಕ್ಷ ರೂ. ಮೀರದ ಕುಟುಂಬಗಳು, ಆರ್ಥಿಕವಾಗಿ ದುರ್ಬಲ ವರ್ಗಗಳು, ಸಣ್ಣ ಮತ್ತು ಅತಿ ಸಣ್ಣ ರೈತರ ಕುಟುಂಬಗಳು ಮತ್ತು ಅಂಗವಿಕಲ ವ್ಯಕ್ತಿಗಳ ಕುಟುಂಬಗಳನ್ನು ಒಳಗೊಳ್ಳುತ್ತದೆ. ಅಡುಗೆ ಅನಿಲ ಸಿಲಿಂಡರ್‌ನ ವೆಚ್ಚವನ್ನು ಮರುಪಾವತಿಸಲಾಗುತ್ತದೆ. ಕಂಪನಿಗಳಿಂದ ಅಧಿಕೃತ ಬಿಲ್ಲಿಂಗ್ ಆಧಾರದ ಮೇಲೆ ಬುಕಿಂಗ್ ಮತ್ತು ವಿತರಣೆಯ ನಂತರ ಕುಟುಂಬದ ಯಜಮಾನಿ ಬ್ಯಾಂಕ್ ಖಾತೆಗೆ ನೇರವಾಗಿ ಯೋಜನೆಯ ಹಣ ಜಮಾ ಮಾಡಲಾಗುತ್ತದೆ ಎಂದು ತಿಳಿಸಿದರು.