ಪುತ್ತೂರು ದರ್ಬೆ ಗಲಾಟೆ: ಆ.25ರಂದು ಸ್ವಯಂಪ್ರೇರಿತ ಬಂದ್‌ಗೆ ಹಿಂದೂ ಜಾಗರಣ ವೇದಿಕೆ ಕರೆ – ಕಹಳೆ ನ್ಯೂಸ್

ಪುತ್ತೂರು: ನಗರದ ದರ್ಬೆಯಲ್ಲಿ ವರ್ತಕರ ಮೇಲೆ ನಡೆದ ದಾಳಿಯನ್ನು ಖಂಡಿಸಿ ಹಾಗೂ ಪೊಲೀಸ್ ಇಲಾಖೆಯ ವೈಫಲ್ಯವನ್ನು ಆರೋಪಿಸಿ ಹಿಂದೂ ಜಾಗರಣ ವೇದಿಕೆ ಆ.25ರಂದು ಪುತ್ತೂರು ನಗರದಲ್ಲಿ ಸ್ವಯಂಪ್ರೇರಿತ ಬಂದ್‌ಗೆ ಕರೆ ನೀಡಿದೆ.
ವರ್ತಕರ ಹಿತರಕ್ಷಣೆ ಹಾಗೂ ನಗರದಲ್ಲಿ ಶಾಂತಿ, ಸಾಮರಸ್ಯ ಕಾಪಾಡುವ ನಿಟ್ಟಿನಲ್ಲಿ ಬಂದ್‌ಗೆ ನಗರದ ಎಲ್ಲಾ ಪ್ರಮುಖ ವ್ಯಾಪಾರಸ್ಥರು ಹಾಗೂ ನಾಗರಿಕರು ಬೆಂಬಲ ನೀಡುವಂತೆ ವೇದಿಕೆ ಮನವಿ ಮಾಡಿದೆ.
ಈ ಹಿನ್ನೆಲೆಯಲ್ಲಿ ಆ.25ರಂದು ಪುತ್ತೂರು ನಗರದಲ್ಲಿ ಸ್ವಯಂಪ್ರೇರಿತ ಬಂದ್ ನಡೆಸಿ, ದರ್ಬೆ ಘಟನೆಯನ್ನು ಖಂಡಿಸುವಂತೆ ಹಿಂದೂ ಜಾಗರಣ ವೇದಿಕೆ ಮನವಿ ಮಾಡಿಕೊಂಡಿದೆ.











