ಪುತ್ತೂರು ದರ್ಬೆ ಗಲಾಟೆ: ಅಮಾನುಷ ದಾಳಿ ಖಂಡಿಸಿ ಆ.25ರ ಸ್ವಯಂಪ್ರೇರಿತ ಬಂದ್‌ಗೆ ಬಿಜೆಪಿ ಬೆಂಬಲ – ಕಹಳೆ ನ್ಯೂಸ್

Screenshot
ಪುತ್ತೂರು: ನಗರದ ದರ್ಬೆಯಲ್ಲಿ ವರ್ತಕರ ಮೇಲೆ ನಡೆದ ಅಮಾನುಷ ದಾಳಿಯನ್ನು ಖಂಡಿಸಿ ಹಾಗೂ ಪೊಲೀಸ್ ಇಲಾಖೆಯ ವೈಫಲ್ಯವನ್ನು ವಿರೋಧಿಸಿ ಹಿಂದೂ ಜಾಗರಣ ವೇದಿಕೆ ಕರೆ ನೀಡಿರುವ ಆಗಸ್ಟ್ 25ರ ಸ್ವಯಂಪ್ರೇರಿತ ಬಂದ್‌ಗೆ ಪುತ್ತೂರು ಬಿಜೆಪಿ ಸಂಪೂರ್ಣ ಬೆಂಬಲ ಘೋಷಿಸಿದೆ.
ಈ ಕುರಿತು ಪುತ್ತೂರು ಬಿಜೆಪಿ ನಗರ ಮಂಡಲ ಅಧ್ಯಕ್ಷ ಶಿವಕುಮಾರ್ ಪಿ.ಬಿ. ಹಾಗೂ ಗ್ರಾಮಾಂತರ ಮಂಡಲ ಅಧ್ಯಕ್ಷ ದಯಾನಂದ ಶೆಟ್ಟಿ ಉಜಿರೆಮಾರು ಅವರ ಸಹಿಯೊಂದಿಗೆ ಪತ್ರಿಕಾ ಪ್ರಕಟಣೆ ಹೊರಡಿಸಲಾಗಿದೆ.
ದರ್ಬೆ ಘಟನೆಯನ್ನು ಖಂಡಿಸಿ ನಡೆಯಲಿರುವ ಸ್ವಯಂಪ್ರೇರಿತ ಬಂದ್‌ಗೆ ಸಾರ್ವಜನಿಕರು ಹಾಗೂ ವರ್ತಕರು ಸಹಕರಿಸುವಂತೆ ಬಿಜೆಪಿ ಮನವಿ ಮಾಡಿದೆ.











