Recent Posts

Tuesday, August 25, 2026
ಸುದ್ದಿ

ಹಿಂದೂ ಜಾಗರಣಾ ವೇದಿಕೆ ಕರೆ ನೀಡಿದ ಸ್ವಯಂಪ್ರೇರಿತ ಪುತ್ತೂರು ಬಂದ್ ಗೆ ಅರುಣ್ ಕುಮಾರ್ ಪುತ್ತಿಲ ಬೆಂಬಲ – ಕಹಳೆ ನ್ಯೂಸ್

ಪುತ್ತೂರು ನಗರದ ದರ್ಬೆಯಲ್ಲಿ ವರ್ತಕರ ಮೇಲೆ ನಡೆದ ದಾಳಿಯನ್ನು ಖಂಡಿಸಿ ಹಾಗೂ ಪೊಲೀಸ್ ಇಲಾಖೆಯ ವೈಫಲ್ಯವನ್ನು ಆರೋಪಿಸಿ ಹಿಂದೂ ಜಾಗರಣ ವೇದಿಕೆ ಆ.25ರಂದು ಪುತ್ತೂರು ನಗರದಲ್ಲಿ ಸ್ವಯಂಪ್ರೇರಿತ ಬಂದ್‌ಗೆ ಕರೆ ನೀಡಿದೆ. ವರ್ತಕರ ಹಿತರಕ್ಷಣೆ ಹಾಗೂ ನಗರದಲ್ಲಿ ಶಾಂತಿ, ಸಾಮರಸ್ಯ ಕಾಪಾಡುವ ನಿಟ್ಟಿನಲ್ಲಿ ಬಂದ್‌ಗೆ ನಗರದ ಎಲ್ಲಾ ಪ್ರಮುಖ ವ್ಯಾಪಾರಸ್ಥರು ಹಾಗೂ ನಾಗರಿಕರು ಬೆಂಬಲ ನೀಡುವಂತೆ ವೇದಿಕೆ ಮನವಿ ಮಾಡಿದೆ. ಈ ಹಿನ್ನೆಲೆಯಲ್ಲಿ ಆ.25ರಂದು ಪುತ್ತೂರು ನಗರದಲ್ಲಿ ಸ್ವಯಂಪ್ರೇರಿತ ಬಂದ್ ನಡೆಸಿ, ದರ್ಬೆ ಘಟನೆಯನ್ನು ಖಂಡಿಸುವಂತೆ ಹಿಂದೂ ಜಾಗರಣ ವೇದಿಕೆ ಮನವಿ ಮಾಡಿಕೊಂಡಿದೆ.

ಜಾಹೀರಾತು

ಹಿಂದೂ ಜಾಗರಣಾ ವೇದಿಕೆ ಕರೆ ನೀಡಿದ ಸ್ವಯಂಪ್ರೇರಿತ ಪುತ್ತೂರು ಬಂದ್ ಗೆ ಅರುಣ್ ಕುಮಾರ್ ಪುತ್ತಿಲ ಬೆಂಬಲ ಸೂಚಿಸಿದ್ದು , ಹಿಂದೂ ಸಮಾಜದ ಯಾವುದೇ ನಿರ್ಧಾರದ ಜೊತೆ ನಾವು ಇದ್ದೇವೆ ಎಂದು ಅರುಣ್ ಕುಮಾರ್ ಪುತ್ತಿಲ ಕಹಳೆ ನ್ಯೂಸ್ ಗೆ ತಿಳಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು