Recent Posts

Wednesday, August 26, 2026
ಸುದ್ದಿ

ಕೊಡಗಿನಲ್ಲಿ ವರುಣನ ಅಬ್ಬರ : ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ..!- ಕಹಳೆ ನ್ಯೂಸ್

ಮಡಿಕೇರಿ: ರಾಜ್ಯದಲ್ಲಿ ಮಳೆ ಕೊರತೆ ನೀಗಿಸಲು ಮೋಡ ಬಿತ್ತನೆ ಕುರಿತು ಚರ್ಚೆಗಳು ನಡೆಯುತ್ತಿರುವ ಬೆನ್ನಲ್ಲೇ, ಕಾವೇರಿಯ ತವರು ಕೊಡಗು ಜಿಲ್ಲೆಯಲ್ಲಿ ವರುಣದೇವ ಅಬ್ಬರಿಸಿ ಬೊಬ್ಬಿರಿಯುತ್ತಿದ್ದಾನೆ. ಕಳೆದ ಮೂರು ದಿನಗಳಿಂದ ಜಿಲ್ಲೆಯಾದ್ಯಂತ ಎಡೆಬಿಡದೆ ಧಾರಾಕಾರ ಮಳೆ ಸುರಿಯುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ.

ಜಾಹೀರಾತು

ಹಾರಂಗಿ ಜಲಾನಯನ ಪ್ರದೇಶದಲ್ಲೂ ವ್ಯಾಪಕ ಮಳೆಯಾಗುತ್ತಿದ್ದು, ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಗಣನೀಯವಾಗಿ ಹೆಚ್ಚಾಗಿದೆ. ಸೋಮವಾರ ರಾತ್ರಿಯಿಂದಲೇ ಜಿಲ್ಲೆಯ ಬಹುತೇಕ ಭಾಗಗಳಲ್ಲಿ ಗುಡುಗು, ಮಿಂಚು ಸಹಿತ ಬಿರುಸಿನ ಮಳೆ ಮುಂದುವರಿದಿದೆ. ಮಳೆಯ ಆರ್ಭಟ ಮುಂದುವರಿದಿರುವುದರಿಂದ ನದಿ ಪಾತ್ರದ ಜನರು ಹಾಗೂ ಪ್ರವಾಸಿಗರು ಮುನ್ನೆಚ್ಚರಿಕೆ ವಹಿಸುವಂತೆ ಸ್ಥಳೀಯ ಆಡಳಿತ ಸೂಚಿಸಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಕಳೆದ ಕೆಲ ದಿನಗಳಿಂದ ಜಿಲ್ಲೆಯ ವಿವಿಧೆಡೆ ಸುರಿಯುತ್ತಿರುವ ಮಳೆಯಿಂದ ಕಾಫಿ, ಮೆಣಸು ಸೇರಿದಂತೆ ಹಲವು ಬೆಳೆಗಳ ಮೇಲೆ ಪರಿಣಾಮ ಬೀರುವ ಆತಂಕ ರೈತರಲ್ಲಿ ಮೂಡಿದೆ. ಕಾಫಿ ತೋಟಗಳಲ್ಲಿ ಹೂವು ಹಾಗೂ ಕಾಯಿಗಳು ಉದುರುವ ಸಾಧ್ಯತೆ ಇದ್ದು, ನಿರಂತರ ಮಳೆಯಿಂದ ಬೆಳೆಗಾರರು ಚಿಂತೆಗೆ ಒಳಗಾಗಿದ್ದಾರೆ.