ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯದಲ್ಲಿ ಟ್ರೈನಿಂಗ್ ಆ್ಯಂಡ್ ಪ್ಲೇಸ್ಮೆಂಟ್ ಸೆಲ್ ಹಾಗೂ ವಿವೇಕಾನಂದ ಸ್ಟಡಿ ಸೆಂಟರ್ ‘ಯಶಸ್’ ಮತ್ತು ವ್ಯವಹಾರ ಆಡಳಿತ ವಿಭಾಗ ಹಾಗು ಐಕ್ಯೂಎಸಿ ಸಹಯೋಗದಲ್ಲಿ ನಡೆದ ‘ಗೇಟ್ ವೇ ಟು ಗವರ್ನಮೆಂಟ್ ಕೆರಿಯರ್’ ಸ್ಪರ್ಧಾತ್ಮಕ ಪರೀಕ್ಷಾ ಕಾರ್ಯಾಗಾರ- ಕಹಳೆ ನ್ಯೂಸ್

ಪುತ್ತೂರು : ಸರ್ಕಾರಿ ಉದ್ಯೋಗ ಅತ್ಯಂತ ಆಕರ್ಷಕವಾದದ್ದು, ಆದರೆ ಅದನ್ನು ಪಡೆಯುವುದು ಕಷ್ಟಕರ. ಸರ್ಕಾರಿ ಉದ್ಯೋಗ ಪಡೆಯಲು ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಬೇಕಾಗಿದ್ದು, ಅದಕ್ಕಾಗಿ ನಮ್ಮಲ್ಲಿ ಆತ್ಮವಿಶ್ವಾಸ ಇರಬೇಕು. ವಿದ್ಯಾರ್ಥಿಗಳು ಸೋಲು-ಗೆಲುವುಗಳನ್ನು ಸಮಾನವಾಗಿ ಸ್ವೀಕರಿಸುವ ಗುಣವನ್ನು ಬೆಳೆಸಿಕೊಳ್ಳಬೇಕು. ವಿದ್ಯಾರ್ಥಿಗಳು ಪಠ್ಯಪುಸ್ತಕದ ಜ್ಞಾನಕ್ಕಿಂತ ಹೊರಗಿನ ವಿಷಯಗಳ ಬಗ್ಗೆಯೂ ತಿಳಿದುಕೊಳ್ಳಬೇಕು ಎಂದು ಸವಣೂರು ಸರಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಹರಿಶಂಕರ್ ಕೆ.ಎಂ. ತಿಳಿಸಿದರು.
ಇವರು ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ) ಪುತ್ತೂರು ಇಲ್ಲಿನ ಟ್ರೈನಿಂಗ್ ಆ್ಯಂಡ್ ಪ್ಲೇಸ್ಮೆಂಟ್ ಸೆಲ್ ಹಾಗೂ ವಿವೇಕಾನಂದ ಸ್ಟಡಿ ಸೆಂಟರ್ ‘ಯಶಸ್’ ಮತ್ತು ವ್ಯವಹಾರ ಆಡಳಿತ ವಿಭಾಗ ಹಾಗು ಐಕ್ಯೂಎಸಿ ಸಹಯೋಗದಲ್ಲಿ ನಡೆದ ‘ಗೇಟ್ ವೇ ಟು ಗವರ್ನಮೆಂಟ್ ಕೆರಿಯರ್’ ಸ್ಪರ್ಧಾತ್ಮಕ ಪರೀಕ್ಷಾ ಕಾರ್ಯಾಗಾರದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.
ಭಾರತದಲ್ಲಿ ಸರ್ಕಾರಿ ಉದ್ಯೋಗ ಹೆಚ್ಚು ಮನ್ನಣೆಯನ್ನು ಪಡೆದಿದೆೆ. ಹಾಗಾಗಿ ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಲು ಸಿದ್ಧರಾಗಬೇಕು. ಹಲವಾರು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ನೋಂದಣಿ ಮಾಡಿಕೊಂಡು ಪರೀಕ್ಷೆ ಬರೆಯುವುದರಿಂದ ಆತ್ಮವಿಶ್ವಾಸ ಹೆಚ್ಚುತ್ತದೆ ಎಂದು ಕಾರ್ಯಕ್ರಮದ ವಹಿಸಿದ ವಿವೇಕಾನಂದ ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ಶ್ರೀಕೃಷ್ಣ ಗಣರಾಜ್ ಭಟ್ ಹೇಳಿದರು.
ಕಾರ್ಯಕ್ರಮವನ್ನು ಕಾಲೇಜಿನ ವಿಶೇಷ ಅಧಿಕಾರಿ (ಶಿಕ್ಷಕ ಅಭಿವೃದ್ಧಿ) ಹಾಗೂ ಸಮಾಜಶಾಸ್ತç ವಿಭಾಗದ ಮುಖ್ಯಸ್ಥೆ ಡಾ.ವಿದ್ಯಾ ಎಸ್. ಸ್ವಾಗತಿಸಿ, ಯಶಸ್ ಘಟಕದ ಸಂಯೋಜಕ ಗೋವಿಂದ ರಾಜ್ ಶರ್ಮ ಅವರು ವಂದಿಸಿ, ದ್ವಿತೀಯ ಕಲಾ ವಿಭಾಗದ ವಿದ್ಯಾರ್ಥಿನಿ ಚೈತನ್ಯ ಕಾರ್ಯಕ್ರಮವನ್ನು ನಿರೂಪಿಸಿದರು.











