Recent Posts

Wednesday, August 26, 2026
ಸುದ್ದಿ

ರಜತ ಮಹೋತ್ಸವದ ಸಂಭ್ರಮಾಚರಣೆಯಲ್ಲಿರುವ ಶ್ರೀ ಸರಸ್ವತಿ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘ ನಿಯಮಿತ ಇದರ 23ನೇ ಶಾಖೆಯ ಉದ್ಘಾಟನಾ ಸಮಾರಂಭ- ಕಹಳೆ ನ್ಯೂಸ್

ಪುತ್ತೂರು : ರಜತ ಮಹೋತ್ಸವದ ಸಂಭ್ರಮಾಚರಣೆಯಲ್ಲಿರುವ ಶ್ರೀ ಸರಸ್ವತಿ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘ ನಿಯಮಿತ ಇದರ 23ನೇ ಶಾಖೆಯ ಉದ್ಘಾಟನಾ ಸಮಾರಂಭವು ಆ.29ರಂದು ಬೆಳಗ್ಗೆ 10.30ಕ್ಕೆ ಸಿದ್ದಕಟ್ಟೆಯ ಕಣಿಯೂರು ಕಾಂಪ್ಲೆಕ್ಸ್ ನ ನೆಲಮಹಡಿಯಲ್ಲಿರುವ ಶ್ರೀ ಸರಸ್ವತಿ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘ ನಿಯಮಿತ ಕಛೇರಿಯಲ್ಲಿ ನಡೆಯಲಿದೆ.
ಕಾರ್ಯಕ್ರಮದ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ಬಂಟ್ವಾಳ ವಿಧಾನಸಭಾ ಕ್ಷೇತ್ರದ ಶಾಸಕರಾದ ರಾಜೇಶ್ ನ್ಯಾಕ್ ಉಳಿಪ್ಪಾಡಿ ಅವರು ವಹಿಸಲಿದ್ದು, ಸಂಸದರಾದ ಕ್ಯಾ. ಬ್ರಿಜೇಶ್ ಚೌಟ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.
ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಹರೀಶ್ ಪೂಂಜಾ, ಮಾಜಿ ಸಚಿವ ಅಭಯ ಚಂದ್ರ ಜೈನ್, ಪೂಂಜ ಶ್ರೀ ಪಂಚ ದುರ್ಗಾಪರಮೇಶ್ವರಿ ದೇವಸ್ಥಾನದ ಪ್ರಧಾನ ಅರ್ಚಕರಾದ ವೇದಮೂರ್ತಿ ಶ್ರೀ ಪ್ರಕಾಶ್ ಅಸ್ರಣ್ಣ, ಸಿದ್ಧಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ (ನಿ.) ಇದರ ಅಧ್ಯಕ್ಷರು ಪ್ರಭಾಕರ ಪ್ರಭು, ವಕೀಲರು ಮತ್ತು ನೋಟರಿ ಸುರೇಶ್ ಶೆಟ್ಟಿ, ರಬ್ಬರ್ ಬೋರ್ಡ್ನ ಸದಸ್ಯರಾದ ವಸಂತ್ ಅಣ್ಣಳಿಕೆ, ಸಿದ್ಧಕಟ್ಟೆ ಪಲ್ಗುಣಿ ರೋಟರಿ ಕ್ಲಬ್ ನ ಸ್ಥಾಪಕಾಧ್ಯಕ್ಷರಾದ ಮೈಕಲ್ ಡಿ ಕೋಸ್ತಾ ಭಾಗವಹಿಸಲಿದ್ದಾರೆ.

ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು