Thursday, August 27, 2026
ಜಿಲ್ಲೆಬೆಂಗಳೂರುಸುದ್ದಿ

ನೇಪಾಳದಲ್ಲಿ ಸಿಲುಕಿರುವ ಕನ್ನಡಿಗರ ಮಾಹಿತಿ ಸಂಗ್ರಹಕ್ಕೆ ಮುಂದಾದ ಸರ್ಕಾರ – ಕಹಳೆ ನ್ಯೂಸ್

ಬೆಂಗಳೂರು: ನೇಪಾಳ ಮತ್ತು ಟಿಬೆಟ್ ಗಡಿ ಭಾಗದಲ್ಲಿ ಉಂಟಾಗಿರುವ ಭೀಕರ ಪ್ರವಾಹ ಹಾಗೂ ಭೂಕುಸಿತದ  ಹಿನ್ನೆಲೆಯಲ್ಲಿ, ಅಲ್ಲಿ ಸಿಲುಕಿರುವ ಕನ್ನಡಿಗರ ಸುರಕ್ಷತೆ ಹಾಗೂ ಮಾಹಿತಿ ಸಂಗ್ರಹಕ್ಕೆ ಕರ್ನಾಟಕ ಸರ್ಕಾರ  ಮುಂದಾಗಿದೆ.

ಜಾಹೀರಾತು

ಪ್ರವಾಹ ಪೀಡಿತ ಪ್ರದೇಶಗಳಲ್ಲಿ ರಸ್ತೆ ಸಂಪರ್ಕ ಮತ್ತು ಸಂಚಾರ ವ್ಯವಸ್ಥೆ ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡಿದ್ದು, ಹಲವು ಭಾರತೀಯರು ನಾಪತ್ತೆಯಾಗಿರುವ ವರದಿಗಳು ಬಂದಿವೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ (KSDMA) ರಕ್ಷಣಾ ಕಾರ್ಯಕ್ಕೆ ಸಜ್ಜಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ನೇಪಾಳ ಅಥವಾ ಟಿಬೆಟ್ ಸ್ವಾಯತ್ತ ಪ್ರದೇಶದಲ್ಲಿ (TAR) ಸಿಲುಕಿರುವ ಕನ್ನಡಿಗರು ಹಾಗೂ ಅವರ ಕುಟುಂಬಸ್ಥರ ವಿವರಗಳನ್ನು ಕಲೆಹಾಕಲಾಗುತ್ತಿದೆ. ನೇಪಾಳ ಅಥವಾ ಟಿಬೆಟ್ ಭಾಗದಲ್ಲಿ ತಮ್ಮ ಸಂಬಂಧಿಕರು, ಸ್ನೇಹಿತರು ಅಥವಾ ಪರಿಚಿತರು ಸಿಲುಕಿಕೊಂಡಿದ್ದರೆ, ಅವರ ವಿವರಗಳನ್ನು ತಕ್ಷಣವೇ ಸಂಬಂಧಪಟ್ಟ ಅಧಿಕಾರಿಗಳಿಗೆ ಅಥವಾ ಪ್ರಾಧಿಕಾರಕ್ಕೆ ಒದಗಿಸುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಲಾಗಿದೆ. ಈ ಸಂಬಂಧ ಗೂಗಲ್‌ ಫಾರಂನಲ್ಲಿ ವಿವರ ತುಂಬುವಂತೆ ಮಾಹಿತಿ ಕೋರಲಾಗಿದೆ.

ಸದ್ಯ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ರಕ್ಷಣಾ ಹಾಗೂ ಪರಿಹಾರ ಕಾರ್ಯಾಚರಣೆಗಳು ಭರದಿಂದ ಸಾಗುತ್ತಿದ್ದು, ಸಿಲುಕಿರುವವರನ್ನು ಸುರಕ್ಷಿತವಾಗಿ ಕರೆತರಲು ಎಲ್ಲಾ ಅಗತ್ಯ ನೆರವು ನೀಡಲಾಗುವುದು ಎಂದು ಸರ್ಕಾರ ತಿಳಿಸಿದೆ.