
ವಿವೇಕಾನಂದ ಪದವಿಪೂರ್ವ ಕಾಲೇಜಿನ ವೈದೇಹಿ ಸಭಾಂಗಣದಲ್ಲಿ ಇಕೋ ಹಾಗೂ ಹೆಲ್ತ್ ಕ್ಲಬ್ ನ ಉದ್ಘಾಟನೆ ನೆರವೇರಿತು. ಪ್ರಾಂಶುಪಾಲರಾದ ದೇವಿಚರಣ್ ರೈ ಉದ್ಘಾಟನೆ ನೆರವೇರಿಸಿ ಮಾತನಾಡುತ್ತಾ, ಮನುಷ್ಯನ ಅಸ್ತಿತ್ವವು ಪ್ರಕೃತಿಯೊಂದಿಗೆ ಅವಿನಾಭಾವ ಸಂಬಂಧ ಹೊಂದಿದೆ.
ಅದನ್ನು ಸಂರಕ್ಷಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ಇಂದು ಅಭಿವೃದ್ಧಿಯ ಹೆಸರಿನಲ್ಲಿ ಅರಣ್ಯನಾಶ, ಅತಿಯಾದ ಪ್ಲಾಸ್ಟಿಕ್ ಬಳಕೆ, ನೀರಿನ ದುರ್ಬಳಕೆ, ವಾಯುಮಾಲಿನ್ಯ, ಜಲಮಾಲಿನ್ಯ ಮತ್ತು ಜೀವವೈವಿಧ್ಯದ ನಾಶ ಹೆಚ್ಚಾಗುತ್ತಿದೆ. ಇವುಗಳು ಕೇವಲ ಪರಿಸರದ ಸಮಸ್ಯೆಗಳಲ್ಲ ಇವು ಮಾನವಕುಲದ ಭವಿಷ್ಯಕ್ಕೆ ಸಂಬಂಧಿಸಿದ ಸಮಸ್ಯೆಗಳಾಗಿವೆ ಎಂದು ಹೇಳಿದರು. ಇದೇ ಸಂದರ್ಭದಲ್ಲಿ ಗಿಡನೆಡುವ ಮೂಲಕ ಸಂಘದ ವಿವಿಧ ಚಟುವಟಿಕೆಗಳಿಗೆ ಚಾಲನೆ ನೀಡಲಾಯಿತು.
ಕಾರ್ಯಕ್ರಮದಲ್ಲಿ ಉಪನ್ಯಾಸಕ, ಉಪನ್ಯಾಸಕೇತರ ವೃಂದದವರು, ವಿಜ್ಞಾನ ವಿಭಾಗದ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಇಕೋ ಹಾಗೂ ಹೆಲ್ತ್ ಕ್ಲಬ್ ನ ಸಂಯೋಜಕರಾದ ಅನುಪಮಾ ಶೇಟ್ ಸ್ವಾಗತಿಸಿದರು. ವಿದ್ಯಾರ್ಥಿನಿಯರಾದ ಶಿಖಾ ವಂದಿಸಿ, ಸಮೀಕ್ಷಾ ಎನ್.
ನಿರೂಪಿಸಿದರು. ಕಾಲೇಜಿನ ವಿದ್ಯಾರ್ಥಿನಿಯರು ಪ್ರಾರ್ಥಿಸಿದರು.











