Sunday, August 30, 2026
ಸುದ್ದಿ

ಅನ್ಯ ರಾಜ್ಯಕ್ಕೆ ಅಕ್ರಮವಾಗಿ ಪಡಿತರ ಸಾಗಾಟ : 9 ಲಕ್ಷಕ್ಕೂ ಹೆಚ್ಚು ಮೌಲ್ಯದ ಅಕ್ಕಿ ವಶಕ್ಕೆ- ಕಹಳೆ ನ್ಯೂಸ್

ಕಾರವಾರ: ಬೇರೆ ರಾಜ್ಯಕ್ಕೆ ಅಕ್ರಮವಾಗಿ ಸಾಗಿಸುತ್ತಿದ್ದ 9 ಲಕ್ಷಕ್ಕೂ ಹೆಚ್ಚು ಮೌಲ್ಯದ ಪಡಿತರ ಅಕ್ಕಿಯನ್ನು ವಶಕ್ಕೆ ಪಡೆಯಲಾಗಿದೆ.

ಜಾಹೀರಾತು

ಉತ್ತರ ಕನ್ನಡ  ಜಿಲ್ಲೆಯ ಸಿದ್ದಾಪುರದಿಂದ ಪಡಿತರ ಅಕ್ಕಿಯನ್ನು  ಅಕ್ರಮವಾಗಿ ಮಹಾರಾಷ್ಟ್ರದ ಕೊಲ್ಲಾಪುರಕ್ಕೆ ಸಾಗಿಸುತ್ತಿದ್ದ ವೇಳೆ ಶಿರಸಿಯಲ್ಲಿ ತಹಸಿಲ್ದಾರ್, ಪೊಲೀಸ್ ಇಲಾಖೆ ಜಂಟಿ ಕಾರ್ಯಾಚರಣೆ ನಡೆಸಿದ್ದಾರೆ. ಈ ವೇಳೆ ಹತ್ತು ವ್ಹೀಲ್ ಲಾರಿಯಲ್ಲಿ ಇದ್ದ 476 ಚೀಲ ಪಡಿತರ ಅಕ್ಕಿಯನ್ನು ವಶಪಡಿಸಿಕೊಳ್ಳಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಶಿರಸಿ ತಹಸಿಲ್ದಾರ್ ಪಟ್ಟರಾಜ ಗೌಡ, ನಗರ ಠಾಣೆ ಪಿಎಸ್ಐ ನರಸಿಂಹಲು ನೇತೃತ್ವದಲ್ಲಿ ಈ ದಾಳಿ ನಡೆದಿದೆ. ಸಿದ್ದಾಪುರದಿಂದ ಕೊಲ್ಲಾಪುರ ಕಡೆಗೆ ಅಕ್ರಮವಾಗಿ ಸಾಗಾಟವಾಗುತ್ತಿದ್ದ ವೇಳೆ ಖಚಿತ ಮಾಹಿತಿ ಪಡೆದು ದಿಢೀರ್‌ ದಾಳಿ ನಡೆಸಿ ನೀಲೇಕಣಿ ಭೀಮನಗುಡ್ಡ ಕ್ರಾಸ್ ಬಳಿ ಲಾರಿ ಅಡ್ಡಗಟ್ಟಿದ ಅಧಿಕಾರಿಗಳು ಲಾರಿ ಚಾಲಕನ ಸಮೇತ ಅಕ್ಕಿಯನ್ನು ವಶಕ್ಕೆ ಪಡೆದಿದ್ದಾರೆ.

ಒಂಬತ್ತು ಲಕ್ಷಕ್ಕೂ ಹೆಚ್ಚು ಮೌಲ್ಯದ ಪಡಿತರ ಅಕ್ಕಿ ಎಂದು ಹೇಳಲಾಗಿದ್ದು, ಹೆಚ್ಚಿನ ತನಿಖೆ ಕೈಗೊಳ್ಳಲಾಗಿದೆ. ಘಟನೆ ಸಂಬಂಧ ಶಿರಸಿ ನಗರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.