Sunday, August 30, 2026
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಯುವಶಕ್ತಿಯಿಂದ ಕ್ರೀಡಾ ಕ್ಷೇತ್ರದಲ್ಲಿ ಹೊಸ ಇತಿಹಾಸ ನಿರ್ಮಾಣವಾಗಲಿ- ಎಂ.ಎ ಗಫೂರ್ – ಕಹಳೆ ನ್ಯೂಸ್

ಮಂಗಳೂರು : ಹಾಕಿ ಮಾಂತ್ರಿಕ ಮೇಜರ್ ಧ್ಯಾನ್‍ಚಂದ್ ಅವರು ತಮ್ಮ  ಅಪ್ರತಿಮ ಕ್ರೀಡಾ ಸಾಧನೆಯ ಮೂಲಕ ದೇಶಕ್ಕೆ ಸ್ವರ್ಣದ  ಗೌರವ ತಂದುಕೊಟ್ಟು  ಭಾರತೀಯ ಕ್ರೀಡಾ ಇತಿಹಾಸದಲ್ಲಿ ಅಧ್ಯಾಯ ನಿರ್ಮಿಸಿದ್ದಾರೆ. ಅವರು ನಿರ್ಮಿಸಿದಂತಹ ಇತಿಹಾಸವನ್ನು ಇಂದಿನ ಯುವಜನತೆ ತಮ್ಮ ಪ್ರತಿಭೆ, ಪರಿಶ್ರಮದ ಮೂಲಕ ಮರುನಿರ್ಮಿಸಬೇಕು. ಯುವಜನರು ದೇಶದ ಆಸ್ತಿ. ಸ್ವಾತಂತ್ರ್ಯ ಸಂಗ್ರಾಮದಿಂದ ಹಿಡಿದು ಇಂದಿನವರೆಗೂ ಯುವ ಜನತೆ ಕ್ರೀಡಾ ಕ್ಷೇತ್ರ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ತಮ್ಮ ಪ್ರತಿಭೆ ಮತ್ತು ಸಾಮಥ್ರ್ಯವನ್ನು ಪ್ರದರ್ಶಿಸಿ ದೇಶಕ್ಕೆ ಕೀರ್ತಿ ತಂದಿದ್ದಾರೆ. ದೇಶದ ಅಭಿವೃದ್ಧಿಯಲ್ಲಿ ಯುವಶಕ್ತಿಯ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದು ಕರಾವಳಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎಂ.ಎ ಗಫೂರ್ ಹೇಳಿದರು.

ಜಾಹೀರಾತು

ಅವರು ಶನಿವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಂಗಳೂರು ಮಹಾನಗರಪಾಲಿಕೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮತ್ತು ವಿ. ಒನ್. ಅಕ್ವಾ ಸೆಂಟರ್, ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ಹಾಕಿ ಮಾಂತ್ರಿಕ ಮೇಜರ್ ಧ್ಯಾನ್‍ಚಂದ್ ಹುಟ್ಟುಹಬ್ಬದ ಪ್ರಯುಕ್ತ ನಗರದ ಎಮ್ಮೆಕೆರೆ ಅಂತರಾಷ್ಟ್ರೀಯ ಈಜುಕೊಳದಲ್ಲಿ ನಡೆದ ರಾಷ್ಟ್ರೀಯ ಕ್ರೀಡಾ ದಿನಾಚರಣೆ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಈಜು ಸ್ಪರ್ಧೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಈಜು ಕ್ರೀಡೆ ದೈಹಿಕ ಸಾಮಥ್ರ್ಯವನ್ನು ವೃದ್ಧಿಸುವುದರ ಜೊತೆಗೆ ಮಾನಸಿಕ ಒತ್ತಡ ಹಾಗೂ ಸಮಸ್ಯೆಗಳನ್ನು ದೂರಮಾಡುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಯುವಜನರಲ್ಲಿ ಈಜು ಸೇರಿದಂತೆ ವಿವಿಧ ಕ್ರೀಡೆಗಳ ಬಗ್ಗೆ ಆಸಕ್ತಿ ಬೆಳೆಸುವುದು ಅಗತ್ಯ ಎಂದು ಅವರು ಹೇಳಿದರು.

ಅಧ್ಯಕ್ಷತೆ ವಹಿಸಿದ್ದ  ಕರ್ನಾಟಕ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ ಮಾತನಾಡಿ, ಇಂದಿನ ಮಕ್ಕಳು ಹೆಚ್ಚಿನ ಸಮಯವನ್ನು ಮೊಬೈಲ್ ಬಳಕೆಯಲ್ಲಿ ಕಳೆಯುತ್ತಿರುವ ಸಂದರ್ಭದಲ್ಲಿ, ಅವರನ್ನು ಕ್ರೀಡೆಯತ್ತ ಸೆಳೆಯುವುದು ಅಗತ್ಯವಾಗಿದೆ. ಈಜು ಕ್ರೀಡೆಯಂತಹ ಚಟುವಟಿಕೆಗಳು ಮಕ್ಕಳ ದೈಹಿಕ ಆರೋಗ್ಯವನ್ನು ವೃದ್ಧಿಸುವುದರ ಜೊತೆಗೆ ಆತ್ಮವಿಶ್ವಾಸ, ಏಕಾಗ್ರತೆ ಮತ್ತು ಶಿಸ್ತನ್ನು ಬೆಳೆಸುವಲ್ಲಿ ಸಹಕಾರಿ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ರಾಜ್ಯ  ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷ ಶಾಹಿದ್ ತೆಕ್ಕಿಲ್, ಮಾಜಿ ಕಾಪೆರ್Çರೇಟರ್ ವೇದಾವತಿ,  ಬ್ಯಾಡ್ಮಿಂಟನ್ ಅಸೋಸಿಯೇಷನ್ ಅಧ್ಯಕ್ಷ ಸಂತೋμï  ಶೆಟ್ಟಿ, ಮಾಸ್ಟರ್ಸ್ ಅಥ್ಲೆಟ್ಸ್ ಜಗದೀಶ್ ಶೆಟ್ಟಿ,  ಸಫಿರ್ಂಗ್ ಕ್ಲಬ್ ಪದ್ಮಾನಂದ ನಾಯಕ್, ವೇಯ್ಟ್ ಲಿಫ್ಟಿಂಗ್ ಅಸೋಸಿಯೇಷನ್ ಅಧ್ಯಕ್ಷ ಉಮೇಶ್ ಗಟ್ಟಿ, ವಾಲಿಬಾಲ್ ಅಸೋಸಿಯೇಷನ್ ಅಧ್ಯಕ್ಷ ಸತೀಶ್ ಶೆಟ್ಟಿ, ಕ್ರೀಡಾ ತರಬೇತುದಾರ ಸಾಜಿದ್ ಉಳ್ಳಾಲ,  ವಿ.ಒನ್ ಅಕ್ವಾ ಸೆಂಟರ್ ನಿರ್ದೇಶಕ ನವೀನ್ ಮತ್ತಿತರರು ಉಪಸ್ಥಿತರಿದ್ದರು.
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಪ್ರದೀಪ್ ಡಿಸೋಜಾ ಸ್ವಾಗತಿಸಿ, ವಿನೋದ್ ಕುಮಾರ್ ನಿರೂಪಿಸಿದರು.
ಇದೇ ಸಂದರ್ಭದಲ್ಲಿ ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಸಾಧನೆ ಮಾಡಿದ  ಜಿಲ್ಲೆಯ ಕ್ರೀಡಾಪಟುಗಳಿಗೆ ಕ್ರೀಡಾ ಕಿಟ್‍ಗಳನ್ನು ವಿತರಿಸಲಾಯಿತು.

*ಒಂದೇ ಜಾತಿ, ಒಂದೇ ಮತದ ಸಂದೇಶ ಸಾರಿದ ಲೋಕ ಸಂತ ನಾರಾಯಣ ಗುರು- ಶಾಸಕ ಉಮಾನಾಥ ಕೋಟ್ಯಾನ್*
ಮಂಗಳೂರು,ಆ.29(ಕ.ವಾ):- ಕೆಲವೇ ಪಂಗಡಗಳ ಗುರುವಾಗಿ ನಾರಾಯಣ ಗುರುಗಳನ್ನು ಸೀಮಿತಗೊಳಿಸಲಾಗದು. ಅವರು ಲೋಕ ಸಂತರು.  ಜಾತಿ, ಮತ, ಬೇಧಭಾವಗಳನ್ನು ಬದಿಗಿರಿಸಿ ಒಂದೇ ಜಾತಿ, ಒಂದೇ ಮತ, ಒಂದೇ ದೇವರು ಎಂಬ ಮಾನವೀಯ  ಸಂದೇಶವನ್ನು ಲೋಕಕ್ಕೆ ಸಾರಿದ ಮಹಾನ್ ಸಮಾಜ ಸುಧಾರಕ ನಾರಾಯಣ ಗುರುಗಳು ಎಂದು ಮೂಡಬಿದ್ರೆ ಶಾಸಕ ಉಮಾನಾಥ್ ಕೋಟ್ಯಾನ್ ಹೇಳಿದರು.
ಅವರು ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಂಯುಕ್ತ ಆಶ್ರಯದಲ್ಲಿ ನಗರದ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ನಡೆದ
ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಉದ್ಘಾಟಿಸಿ ಮಾತನಾಡಿದರು.
ಹಿಂದುಳಿದ ವರ್ಗದವರಿಗೆ ದೇವಾಲಯ ಪ್ರವೇಶ ಸೇರಿದಂತೆ ಸಾಮಾಜಿಕ ಸಮಾನತೆಯ ಹಕ್ಕುಗಳಿಗೆ ಶಾಂತಿಯುತವಾದ ಮಾರ್ಗದಲ್ಲಿ ಸಮಾಜ ಸುಧಾರಣೆಗೆ ಹೋರಾಡಿದವರು. ಮಹಾತ್ಮ ಗಾಂಧಿ, ರವೀಂದ್ರನಾಥ್ ಟಾಗೋರ್ ಅವರಂತಹ ಮಹನೀಯರು  ಗುರುಗಳ ವಿಚಾರಧಾರೆ ಮತ್ತು ವ್ಯಕ್ತಿತ್ವದಿಂದ  ಪ್ರಭಾವಿತರಾಗಿದ್ದರು. ನಾರಾಯಣ ಗುರುಗಳ ಚಿಂತನೆಗಳು, ಆದರ್ಶ  ಸಮಾಜಕ್ಕೆ ದಾರಿದೀಪ. ನಾರಾಯಣ ಗುರು ಜಯಂತಿಯು ಕೇವಲ ಒಂದು ಸಮುದಾಯದ ಆಚರಣೆಯಾಗದೆ,  ಎಲ್ಲಾ ಸಮಾಜದವರು ಒಟ್ಟಾಗಿ ಭಾಗವಹಿಸಬೇಕು ಎಂದು ಅವರು ಹೇಳಿದರು.
ಉಡುಪಿ ರಾಜ್ಯಶಾಸ್ತ್ರ ಉಪನ್ಯಾಸಕ ದಯಾನಂದ ಕರ್ಕೇರ ಉಗ್ಗೆಲ್ ಬೆಟ್ಟು ಉಪನ್ಯಾಸ ನೀಡಿ, ಸಮಾಜವನ್ನು ಸಂಯಮದಿಂದ ಕಟ್ಟಿದ ಶ್ರೇಷ್ಠ ಸಂತ ಬ್ರಹ್ಮಶ್ರೀ ನಾರಾಯಣ ಗುರುಗಳು.  ನಾರಾಯಣ ಗುರುಗಳು ಸಾರಿದ ಸಮಾನತೆ, ಶಿಕ್ಷಣ, ಮಾನವೀಯತೆಯ ಚಿಂತನೆಗಳನ್ನು ಕೇವಲ ಮಾತುಗಳಿಗೆ ಸೀಮಿತಗೊಳಿಸದೆ, ಸಮಾಜದ ಪ್ರತಿಯೊಂದು ಹಂತದಲ್ಲೂ ಅನುμÁ್ಠನಗೊಳಿಸುವ ಅಗತ್ಯವಿದೆ. ಅವರ ಸಂದೇಶಗಳನ್ನು ಅನುಷ್ಠಾನ ಮಾಡುವ ಸಂಕಲ್ಪ ಮಾಡಬೇಕು. ಸುಧಾರಣೆಯ ಆಯಾಮಗಳಲ್ಲಿ ಬಳಸಿದ ಗುರುಗಳÀ  ಮಾನವತಾವಾದದ ಶ್ರೇಷ್ಠ ಆಲೋಚನೆಗಳು, ತತ್ವಗಳನ್ನು ಅನುμÁ್ಠನಗೊಳಿಸುವ ಮೂಲಕ ಸಮಾನತೆ ಮತ್ತು ಸೌಹಾರ್ದತೆಯ ಸಮಾಜ ನಿರ್ಮಾಣ ಸಾಧ್ಯವಾಗುತ್ತದೆ  ಎಂದು ಅವರು ಹೇಳಿದರು.
ಶಾಸಕ ಡಿ ವೇದವ್ಯಾಸ ಕಾಮತ್ ಅಧ್ಯಕ್ಷತೆ ವಹಿಸಿದ್ದರು.
ಕಾರ್ಯಕ್ರಮದಲ್ಲಿ ಕರಾವಳಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ  ಎಂ.ಎ ಗಫೂರ್, ಕರ್ನಾಟಕ ಪರಿಸರ ಪ್ರವಾಸೋದ್ಯಮ ಮಂಡಳಿ ಅಧ್ಯಕ್ಷೆ ಶಾಲೆಟ್ ಲವೀನಾ ಪಿಂಟೋ, ಕರ್ನಾಟಕ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ,   ದ.ಕ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್  ಅಧ್ಯಕ್ಷ ಡಾ.ಎಂ.ಪಿ ಶ್ರೀನಾಥ್, ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಅಧ್ಯಕ್ಷ ಜಯರಾಜ್ ಹೆಚ್ ಸೋಮಸುಂದರಂ, ಹೆಚ್ಚುವರಿ ಪೋಲಿಸ್ ವರಿಷ್ಠಾಧಿಕಾರಿ ಅನಿಲ್ ಕುಮಾರ್ ಭೂಮರೆಡ್ಡಿ, ಮಂಗಳೂರು ತಹಶೀಲ್ದಾರ್ ರಮೇಶ್ ಬಾಬು, ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕ ಜಯರಾಮ್ ಮತ್ತಿತ್ತರರು ಉಪಸ್ಥಿತರಿದ್ದರು.
ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ರಾಜೇಶ್ ಜಿ ಸ್ವಾಗತಿಸಿದರು.

*ಗೃಹಲಕ್ಷ್ಮಿಗೆ ಮೂರು ವರ್ಷದ ಸಂಭ್ರಮ*
*ಇಂದು ಗುಲಾಬಿ ಬೆಳಕಿನಲ್ಲಿ ಕಂಗೊಳಿಸಲಿದೆ ದ.ಕ ಜಿಲ್ಲಾಧಿಕಾರಿ ಕಚೇರಿ ಕಟ್ಟಡ*
ಮಂಗಳೂರು,ಆ.29(ಕ.ವಾ):- ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲೊಂದಾದ ಗೃಹ ಲಕ್ಷ್ಮಿಗೆ ಮೂರು ವರ್ಷಗಳ ಸಂಭ್ರಮ. ಈ ಸಂಭ್ರಮದ ಸವಿನೆನಪಿಗಾಗಿ  ಬೆಂಗಳೂರಿನ ವಿಧಾನಸೌಧ, ಬೆಳಗಾವಿಯ ಸುವರ್ಣಸೌಧ, ಮೈಸೂರು ಅರಮನೆ, ಚಿತ್ರದುರ್ಗದ ಕಲ್ಲಿನಕೋಟೆ, ಹಂಪಿಯ ಕಲ್ಲಿನರಥ, ಮಂಗಳೂರಿನ ಪಡೀಲ್‍ನಲ್ಲಿರುವ ದಕ್ಷಿಣ ಕನ್ನಡ  ಜಿಲ್ಲಾಧಿಕಾರಿ ಕಚೇರಿ ಕಟ್ಟಡ, ಬೆಳಗಾವಿ ಕಿತ್ತೂರು ಚೆನ್ನಮ್ಮ ವೃತ್ತಗಳು ಆಗಸ್ಟ್ 30 ಸಂಜೆ 6 ರಿಂದ ರಾತ್ರಿ 10 ರವರೆಗೆ ಗುಲಾಬಿ ಬಣ್ಣದ ಬೆಳಕಿನಲ್ಲಿ ಕಂಗೊಳಿಸಲಿವೆ. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಈ ವಿದ್ಯುದ್ದೀಪಾಲಂಕಾರ ಆಯೋಜಿಸುತ್ತಿದೆ.
ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ ಪ್ರತಿ ಮನೆಯ ಯಜಮಾನಿಗೆ ಪ್ರತಿ ತಿಂಗಳು ರೂ.2 ಸಾವಿರ ನೀಡುವ ಮೂಲಕ ಮಹಿಳೆಯರು ಸ್ವಾವಲಂಬಿ ಜೀವನ ರೂಪಿಸಿಕೊಳ್ಳಲು ನೆರವಾಗಿರುವ ಗೃಹಲಕ್ಷ್ಮೀ ಯೋಜನೆ ಜಾರಿಗೆ ಬಂದು  ಆ.30ಕ್ಕೆ  ಮೂರು ವರ್ಷಗಳನ್ನು ಪೂರೈಸಲಿದೆ.
ಸರ್ಕಾರವು ಗೃಹಲಕ್ಷ್ಮೀ ಯೋಜನೆ ಮೂರು ವರ್ಷಗಳನ್ನು ಪೂರೈಸುತ್ತಿರುವ ಈ ಸಂದರ್ಭದಲ್ಲಿ ಮಹಿಳೆಯರ ಹೆಮ್ಮೆಯ ಸಂಕೇತವೆಂದು ಗುರುತಿಸಿರುವ ಗುಲಾಬಿ  ಬಣ್ಣದ ಬೆಳಕಿನ ವ್ಯವಸ್ಥೆಯನ್ನು ಮಾಡಲಾಗಿದೆ.
ಇದುವರೆಗೂ  ಈ ಯೋಜನೆಯಡಿ 1.20 ಕೋಟಿ ಫಲಾನುಭವಿಗಳ ಖಾತೆಗೆ 76500 ಕೋಟಿಗೂ  ಹೆಚ್ಚು ಹಣ ಪಾವತಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

*ಮಂಗಳೂರು ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ತಾಲೂಕು ಮಟ್ಟದ ಸಮಾವೇಶ  ಸೆ.1 ರಂದು*
ಮಂಗಳೂರು,ಆ.29(ಕ.ವಾ):- ದ.ಕ. ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್, ಮಂಗಳೂರು ತಾಲೂಕು ಮಟ್ಟದ ಪಂಚ ಗ್ಯಾರಂಟಿ ಯೋಜನೆಗಳ ಅನುμÁ್ಠನ ಸಮಿತಿ, ಮಂಗಳೂರು ತಾಲೂಕು ಇವರ ವತಿಯಿಂದ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ತಾಲೂಕು ಮಟ್ಟದ ಸಮಾವೇಶ ಸೆಪ್ಟೆಂಬರ್  1 ರಂದು  ಬೆಳಿಗ್ಗೆ 10.30 ಗಂಟೆಗೆ ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಡೆಯಲಿದೆ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಹಜ್ ಮತ್ತು ವಕ್ಫ್ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ್ ಖಂಡ್ರೆ  ಹಾಗೂ ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುμÁ್ಠನ ಪ್ರಾಧಿಕಾರದ ಅಧ್ಯಕ್ಷ      ಹೆಚ್ ಎಂ. ರೇವಣ್ಣ ಗೌರವ ಉಪಸ್ಥಿತರಿರಲಿದ್ದಾರೆ. ಶಾಸಕ ಡಿ. ವೇದವ್ಯಾಸ ಕಾಮತ್ ಅಧ್ಯಕ್ಷತೆ ವಹಿಸಲಿದ್ದಾರೆ.