Monday, August 31, 2026
ಸುದ್ದಿ

ಬಾಗಲಕೋಟೆ: ಶೆಡ್‌ಗಳಿಗೆ ಆಕಸ್ಮಿಕವಾಗಿ ಹೊತ್ತಿಕೊಂಡ ಬೆಂಕಿ; 20 ತಾತ್ಕಾಲಿಕ ನಿವಾಸಗಳು ಸುಟ್ಟು ಭಸ್ಮ – ಕಹಳೆ ನ್ಯೂಸ್

ಬಾಗಲಕೋಟೆ: ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ನಾರಾಯಣಪುರ  ಜಲಾಶಯದ ಪ್ರವಾಹ ಸಂತ್ರಸ್ತರ ತಾತ್ಕಾಲಿಕ ಶೆಡ್‌ಗಳು  ಸುಟ್ಟು ಕರಕಲಾಗಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಇದ್ದಲಗಿ ಗ್ರಾಮದಲ್ಲಿ ನಡೆದಿದೆ.

ಜಾಹೀರಾತು

ನಿನ್ನೆ ರಾತ್ರಿ ಸಂಭವಿಸಿದ ಅಗ್ನಿ ಅವಘಡದಲ್ಲಿ 20ಕ್ಕೂ ಹೆಚ್ಚು ಶೆಡ್‌ಗಳು ಸಂಪೂರ್ಣವಾಗಿ ಸುಟ್ಟುಹೋಗಿವೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಶ್ರಾವಣ ಮಾಸದ ಹಿನ್ನೆಲೆ ಸಂತ್ರಸ್ತರು ಪುರಾಣ ಕೇಳಲು ತೆರಳಿದ್ದರು. ಇದೇ ವೇಳೆ ಶೆಡ್‌ಗಳಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಪುರಾಣ ಕೇಳಲು ಹೋಗದೆ ಶೆಡ್‌ಗಳಲ್ಲೇ ಇದ್ದಿದ್ದರೆ ಭಾರೀ ದುರಂತ ಸಂಭವಿಸುವ ಸಾಧ್ಯತೆ ಇತ್ತು ಎಂದು ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ.