Tuesday, September 1, 2026
ಸುದ್ದಿ

ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ನೂತನ ಕಂಪ್ಯೂಟರ್ ಲ್ಯಾಬ್ ಹಾಗೂ ಸ್ಮಾರ್ಟ್ ಕ್ಲಾಸ್‌ರೂಮ್ ಗಳ ಉದ್ಘಾಟನೆ -ಕಹಳೆ ನ್ಯೂಸ್

ಪುತ್ತೂರು : ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ನೂತನವಾಗಿ ನಿರ್ಮಿಸಲಾದ ಕಂಪ್ಯೂಟರ್ ಸೈನ್ಸ್ ಲ್ಯಾಬ್ ಹಾಗೂ ಸ್ಮಾರ್ಟ್ ಕ್ಲಾಸ್‌ರೂಮ್ ಗಳ ಉದ್ಘಾಟನೆ ನೆರವೇರಿತು.
ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಕೃಷ್ಣ ಕುಮಾರ್ ಶೆಟ್ಟಿ ಕಡಬ ಕಂಪ್ಯೂಟರ್ ಲ್ಯಾಬ್ ನ್ನು ಉದ್ಘಾಟಿಸಿ ಮಾತನಾಡುತ್ತಾ , ಬುದ್ಧಿಶಕ್ತಿ ಹಾಗೂ ಜ್ಞಾನಶಕ್ತಿಯನ್ನು ಹೆಚ್ಚಿಸಿಕೊಳ್ಳುವ ಮೂಲಕ ವಿದ್ಯಾರ್ಥಿಗಳು ಆಧುನಿಕ ತಂತ್ರಜ್ಞಾನದೊAದಿಗೆ ಹೆಜ್ಜೆ ಹಾಕಲು ಕಂಪ್ಯೂಟರ್ ಲ್ಯಾಬ್ ಸಹಕಾರಿಯಾಗಲಿದೆ.

ಜಾಹೀರಾತು

ತಂತ್ರಜ್ಞಾನವನ್ನು ಕೇವಲ ಮನರಂಜನೆಗಾಗಿ ಬಳಸದೆ, ಜ್ಞಾನಾರ್ಜನೆ, ಸಂಶೋಧನೆ ಮತ್ತು ಸೃಜನಶೀಲತೆಯ ಬೆಳವಣಿಗೆಗೆ ಬಳಸಿಕೊಳ್ಳಬೇಕು ಎಂದು ಅವರು ಹೇಳಿದರು. ಇದೇ ಸಂದರ್ಭದಲ್ಲಿ ಸ್ಮಾರ್ಟ್ ಕ್ಲಾಸ್‌ರೂಮ್ ಗಳ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದ, ವಿವೇಕಾನಂದ ವಿದ್ಯಾವರ್ಧಕ ಸಂಘದ ನಿಕಟಪೂರ್ವ ಕಾರ್ಯದರ್ಶಿಗಳಾದ ಡಾ.ಕೆ.ಎಂ.ಕೃಷ್ಣ ಭಟ್, ಕಾಲಕಾಲಕ್ಕೆ ಬದಲಾಗುತ್ತಿರುವ ಹೊಸ ತಂತ್ರಜ್ಞಾನಗಳನ್ನು ಅಳವಡಿಸಿಕೊಳ್ಳುವುದು ಇಂದಿನ ಅಗತ್ಯವಾಗಿದೆ. ಆಧುನಿಕ ಶಿಕ್ಷಣದಲ್ಲಿ ಕಂಪ್ಯೂಟರ್
ಮತ್ತು ಡಿಜಿಟಲ್ ತಂತ್ರಜ್ಞಾನಗಳು ಪ್ರಮುಖ ಪಾತ್ರ ವಹಿಸುತ್ತಿವೆ. ವಿದ್ಯಾರ್ಥಿಗಳು ತಮ್ಮ ಜ್ಞಾನವನ್ನು  ವಿಸ್ತರಿಸಿಕೊಳ್ಳಲು, ಹೊಸ ವಿಷಯಗಳನ್ನು ಅನ್ವೇಷಿಸಲು
ಹಾಗೂ ತಮ್ಮ ಕೌಶಲ್ಯಗಳನ್ನು ಅಭಿವೃದ್ಧಿಪಡಿಸಿಕೊಳ್ಳಲು ಕಂಪ್ಯೂಟರ್ ಲ್ಯಾಬ್ ಉತ್ತಮ ವೇದಿಕೆಯಾಗಲಿದೆ ಎಂದು ನುಡಿದರು. ಇನ್ನೋರ್ವ ಅತಿಥಿಗಳಾದ ಪುತ್ತೂರಿನ ದಿ ವೆಬ್ ಪೀಪಲ್ ಸಂಸ್ಥೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಸಹಸಂಸ್ಥಾಪಕರಾದ ಶರತ್ ಶ್ರೀನಿವಾಸ್ ಇವರು ಮಾತನಾಡಿ,ಶಿಕ್ಷಣವು ಸಂಪೂರ್ಣವಾಗಬೇಕಾದರೆ ಕಲಿತ ಜ್ಞಾನವನ್ನು
ಪ್ರಾಯೋಗಿಕವಾಗಿ ಅನ್ವಯಿಸುವುದು ಬಹಳ ಮುಖ್ಯ. ಕೇವಲ ಪುಸ್ತಕದ ಜ್ಞಾನಕ್ಕೆ ಸೀಮಿತವಾಗದೆ, ಕಲಿತದ್ದನ್ನು ಕಾರ್ಯರೂಪಕ್ಕೆ ತರುವ ಮೂಲಕ ನಿಜವಾದ ಜ್ಞಾನವನ್ನು ಪಡೆಯಲು ಸಾಧ್ಯ ಎಂದು ಅಭಿಪ್ರಾಯಪಟ್ಟರು. ಇದೇ ಸಂದರ್ಭದಲ್ಲಿ ಸುಸಜ್ಜಿತ ಕಂಪ್ಯೂಟರ್ ಲ್ಯಾಬ್ ನಿರ್ಮಾಣದಲ್ಲಿ ಸಹಕರಿಸಿದ ಉigಚಿಟಿಣiಛಿ ಛಿoಟಿsಣಡಿuಛಿಣioಟಿ ಚಿಟಿಜ iಟಿಣeಡಿioಡಿs ಮಾಲಕರಾದ ಪ್ರವೀಣ್ ಎನ್. ಇವರನ್ನು ಗೌರವಿಸಲಾಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಕಾರ್ಯಕ್ರಮದ ವೇದಿಕೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಆಡಳಿತಮಂಡಳಿ ಅಧ್ಯಕ್ಷರು ಹಾಗೂ ವಿವೇಕಾನಂದ ವಿದ್ಯಾವರ್ಧಕ ಸಂಘದ ನಿರ್ದೇಶಕರಾದ ರವೀಂದ್ರ ಪಿ. ಹಾಗೂ ಪ್ರಾಂಶುಪಾಲರಾದ ದೇವಿಚರಣ್ ರೈ ಎಮ್. ಉಪಸ್ಥಿತರಿದ್ದರು.

ಈ ಕಾರ್ಯಕ್ರಮದಲ್ಲಿ ಕಾಲೇಜಿನ ಆಡಳಿತಮಂಡಳಿ ನಿರ್ದೇಶಕರು, ವಸತಿ ನಿಲಯಗಳ ಅಧ್ಯಕ್ಷರು, ವಿವಿಧ  ಸಂಸ್ಥೆಗಳ ಪ್ರಾಂಶುಪಾಲರುಗಳು, ಉಪನ್ಯಾಸಕ, ಉಪನ್ಯಾಸಕೇತರ ವೃಂದದವರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಉಪನ್ಯಾಸಕರಾದ ಶ್ಯಾಮ್ ಪ್ರಸಾದ್ ಪ್ರಾಸ್ತಾವಿಕ ನುಡಿಗಳೊಂದಿಗೆ ಸ್ವಾಗತಿಸಿ, ಉಪನ್ಯಾಸಕಿ ಅಕ್ಷತಾ ಜಿ. ನಿರೂಪಿಸಿ, ವಂದಿಸಿದರು. ವಿದ್ಯಾರ್ಥಿನಿ ಹಂಸಿನಿ ಪ್ರಾರ್ಥಿಸಿದರು.