Tuesday, September 1, 2026
ಜಿಲ್ಲೆಸುದ್ದಿ

ಸ್ಕೂಟಿಗೆ ಪೆಟ್ರೋಲ್ ಹಾಕಿಸುತ್ತಿದ್ದ ವ್ಯಕ್ತಿ ಕುಸಿದು ಬಿದ್ದು ಸಾವು : ಹೃದಯಾಘಾತ ಶಂಕೆ -ಕಹಳೆ ನ್ಯೂಸ್

ದಾವಣಗೆರೆ: ಸ್ಕೂಟಿಗೆ ಪೆಟ್ರೋಲ್ ಹಾಕಿಸುತ್ತಿದ್ದ ವ್ಯಕ್ತಿ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ದಾವಣಗೆರೆಯ  ಎಸ್‌ಪಿಎಸ್ ನಗರದ ಭಾರತ್ ಪೆಟ್ರೋಲ್ ಬಂಕ್‌ನಲ್ಲಿ  ನಡೆದಿದೆ.
ದಾವಣಗೆರೆಯ ಮೆಹೆಬೂಬ್ ನಗರದ ನಿವಾಸಿ ಮುನ್ನಾ ಮೃತ ವ್ಯಕ್ತಿ. ದ್ವಿಚಕ್ರ ವಾಹನಕ್ಕೆ ಪೆಟ್ರೋಲ್ ಹಾಕಿಸುವ ವೇಳೆ ಕುಸಿದು ಬಿದ್ದು ಮುನ್ನಾ ಸಾವನ್ನಪ್ಪಿದ್ದಾರೆ. ಹೃದಯಾಘಾತದಿಂದ ಸಾವನ್ನಪ್ಪಿರಬಹುದು ಎಂದು ಶಂಕಿಸಲಾಗಿದೆ.

ಜಾಹೀರಾತು

ಮುನ್ನಾ ಲಾರಿ ಚಾಲಕನಾಗಿ ಕೆಲಸ ಮಾಡುತ್ತಿದ್ದರು. ಲಾರಿ ಓಡಿಸಿದ ಪೇಮೆಂಟ್ ಪಡೆದು ಮನೆಗೆ ಹಿಂದಿರುಗುವಾಗ ಘಟನೆ ನಡೆದಿದೆ. ದ್ವಿಚಕ್ರ ವಾಹನಕ್ಕೆ ಪೆಟ್ರೋಲ್ ಹಾಕಿಸುವ ವೇಳೆ ಏಕಾಏಕಿ ಕುಸಿದು ಬಿದ್ದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕುಸಿದ ವ್ಯಕ್ತಿಯ ಪ್ರಾಣ ಉಳಿಸಲು ಸ್ಥಳೀಯರು ಹರಸಾಹಸಪಟ್ಟರೂ ಯಾವುದೇ ಪ್ರಯೋಜನವಾಗಿಲ್ಲ. ಮೊದಲು ಹೃದಯಾಘಾತಕ್ಕೆ ತುತ್ತಾಗಿದ್ದ ಮುನ್ನಾಗೆ ಸ್ಟಂಟ್ ಅಳವಡಿಸಲಾಗಿತ್ತು. ಇದೀಗ ಎರಡನೇ ಬಾರಿ ಹೃದಯಾಘಾತದಿಂದ ಕೊನೆಯುಸಿರೆಳೆದಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು