ಶ್ರೀರಾಮ ಪದವಿ ಪೂರ್ವವಿದ್ಯಾಲಯದಲ್ಲಿ ಸಾಮಾಜಿಕ ಜಾಲತಾಣ, ಪೋಕ್ಸೋ ಕಾಯ್ದೆ ಹಾಗೂ ಮಾದಕ ವಸ್ತುಗಳ ಕುರಿತು ಮಾಹಿತಿ ಕಾರ್ಯಾಗಾರ- ಕಹಳೆ ನ್ಯೂಸ್

ಶ್ರೀರಾಮ ಪದವಿ ಪೂರ್ವ ವಿದ್ಯಾಲಯದಲ್ಲಿ ಸಾಮಾಜಿಕ ಜಾಲತಾಣಗಳ ಬಳಕೆ, ಪೋಕ್ಸೋ ಕಾಯ್ದೆ ಹಾಗೂ ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತು ಮಾಹಿತಿ ಕಾರ್ಯಾಗಾರವನ್ನು ಆಯೋಜಿಸಲಾಯಿತು. ಕಾರ್ಯಾಗಾರದಲ್ಲಿ ಬಂಟ್ವಾಳ ನಗರ ಪೊಲೀಸ್ ಠಾಣೆಯ ಪೊಲೀಸ್ ಕಾನ್ಸ್ಟೇಬಲ್ ಪ್ರಣಿತ ಮಾತನಾಡಿ ಸಾಮಾಜಿಕ ಜಾಲತಾಣಗಳ ಸುರಕ್ಷಿತ ಬಳಕೆ, ಪೋಕ್ಸೋ ಕಾಯ್ದೆಯ ಉದ್ದೇಶ ಮತ್ತು ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತು ಅಗತ್ಯ ಮಾಹಿತಿಯನ್ನು ನೀಡಿದರು. ವಿದ್ಯಾರ್ಥಿಗಳು ಸಾಮಾಜಿಕ ಜಾಲತಾಣಗಳನ್ನು ಜವಾಬ್ದಾರಿಯುತವಾಗಿ ಬಳಸಬೇಕು ಹಾಗೂ ಯಾವುದೇ ಅಪಾಯಕಾರಿ ಅಥವಾ ಅನುಮಾನಾಸ್ಪದ ಸಂದರ್ಭಗಳಲ್ಲಿ ಎಚ್ಚರಿಕೆಯಿಂದ ವರ್ತಿಸಬೇಕು ಎಂದು ತಿಳಿಸಿದರು.ಅಕ್ಕಪಡೆಯ ಸಿಬ್ಬಂದಿಯಾದ ಸುಕೇತ ಅಕ್ಕ ಪಡೆಯ ಕುರಿತು ಮಾಹಿತಿಯನ್ನು ನೀಡಿದರು. ವೇದಿಕೆಯಲ್ಲಿ ಅಕ್ಕ ಪಡೆಯ ಸಿಬ್ಬಂದಿಯಾದ ಭವ್ಯ ಉಪಸ್ಥಿತರಿದ್ದರು ಕಾರ್ಯಕ್ರಮವನ್ನು ಸಮಾಜಶಾಸ್ತ್ರ ಉಪನ್ಯಾಸಕಿ ಶ್ರೀಮತಿ ದೀಪಿಕಾ ನಿರ್ವಹಿಸಿದರು.











