Tuesday, September 1, 2026
ಬೆಂಗಳೂರುರಾಜ್ಯಸುದ್ದಿ

ಬೆಂಗ್ಳೂರು ಏರ್‌ಪೋರ್ಟ್‌ ರಸ್ತೆಯಲ್ಲಿ ಸರಣಿ ಅಪಘಾತ : ತಪ್ಪಿದ ಭಾರೀ ಅನಾಹುತ – ಕಹಳೆ ನ್ಯೂಸ್

ಬೆಂಗಳೂರು: ನಗರದ ಏರ್‌ಪೋರ್ಟ್‌ ರಸ್ತೆಯಲ್ಲಿ  ಭೀಕರ ಸರಣಿ ಅಪಘಾತ ಸಂಭವಿಸಿದ್ದು, ಅದೃಷ್ಟವಶಾತ್‌ ಭಾರೀ ಅನಾಹುತವೊಂದು ತಪ್ಪಿದೆ.
ಕಳೆದ ರಾತ್ರಿ 9 ಗಂಟೆ ಸುಮಾರಿಗೆ ಏರ್ಪೋರ್ಟ್ ರಸ್ತೆಯ ಫ್ಲೈ ಓವರ್ ಮೇಲೆ ಅಪಘಾತ (Accident) ಸಂಭವಿಸಿದ್ದು, 5 ವಾಹನಗಳು ಜಖಂಗೊಂಡಿವೆ.

ಜಾಹೀರಾತು

ಚಲಿಸುತ್ತಿದ್ದ ವೇಳೆ ಮುಂದಿನ ವಾಹನ ಇದ್ದಕ್ಕಿದ್ದಂತೆ ಬ್ರೇಕ್‌ ಹಾಕಿದ್ದರಿಂದ ಹಿಂದೆ ಬರುತ್ತಿದ್ದ ವಾಹನಗಳು ಒಂದರ ಹಿಂದೆ ಒಂದರಂತೆ ಡಿಕ್ಕಿ ಹೊಡೆದಿವೆ. ಪರಿಣಾಮ 1 ಟಿಪ್ಪರ್‌, 4 ಕಾರು ಹಾಗೂ 1 ಟಿಟಿ ವಾಹನ ಜಖಂಗೊಂಡಿವೆ. ಇದರಿಂದ ಕೆಲಕಾಲ ರಸ್ತೆಯಲ್ಲಿ ಸಂಚಾರ ಅಸ್ತವ್ಯಸ್ತಗೊಂಡಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಘಟನೆ ತಿಳಿಯುತ್ತಿದ್ದಂತೆ ಕೂಡಲೇ ಸ್ಥಳಕ್ಕೆ ದೌಡಾಯಿಸಿದ ಸಂಚಾರ ಪೊಲೀಸರು ವಾಹನಗಳನ್ನ ತೆರುವೊಳಿಸಿ, ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ. ಅದೃಷ್ಟವಶಾತ್‌ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.