Tuesday, September 1, 2026
ಸುದ್ದಿ

ವಿವೇಕಾನಂದ ಪದವಿ ಕಾಲೇಜಿನಲ್ಲಿ ‘Onanilavu 26’ ಕಾರ್ಯಕ್ರಮ- ಕಹಳೆ ನ್ಯೂಸ್

ಪುತ್ತೂರು: ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ (ಸ್ವಾಯತ್ತ) ಮಹಾವಿದ್ಯಾಲಯ ಪುತ್ತೂರು ಇಲ್ಲಿನ ವಿದ್ಯಾರ್ಥಿ ಸಂಘ, ಭಾರತೀಯ ಸಂಸ್ಕøತಿ ಮತ್ತು ಲಲಿತ ಕಲೆಗಳ ಅಧ್ಯಯನ ಕೇಂದ್ರ, ಲಲಿತ ಕಲಾ ಸಂಘ ಮತ್ತು ಐಕ್ಯೂಎಸಿಯ ಜಂಟಿ ಆಶ್ರಯದಲ್ಲಿ ‘‘Onanilavu 26’ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲ ಪ್ರೊ. ಶ್ರೀಕೃಷ್ಣ ಗಣರಾಜ ಭಟ್ ಮಾತನಾಡಿ, ಓಣಂ ಹಬ್ಬವನ್ನು ಕೇರಳದ ಎಲ್ಲೆಡೆ ಆಚರಿಸುವ ಸಂಭ್ರಮದ ಹಬ್ಬವಾಗಿದೆ. ಈ ಹಬ್ಬವು ತನ್ನದೆಯಾದ ಹಿನ್ನಲೆಯನ್ನು ಹೊಂದಿದ್ದು ಈ ದಿನ ಹಲವು ರೀತಿಯ ಹೂವಿನ ಅಲಂಕಾರವನ್ನು ಮಾಡಿ ಹಬ್ಬ ಆಚರಿಸಲಾಗಿತ್ತದೆ ಎಂದು ಶುಭಹಾರೈಸಿ ಕಾಲೇಜಿನ
ಓಣಂ ಆಚರಣೆಗೆ ಚಾಲನೆ ನೀಡಿದರು. ಕಾರ್ಯಕ್ರಮದ ಪ್ರಯುಕ್ತ ವಿದ್ಯಾರ್ಥಿಗಳಿಗೆ ಪೂಕಲಂ ಸ್ಪರ್ಧೆ ಆಯೋಜಿಸಿಲಾಗಿತ್ತು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಂದ ಚೆಂಡೆ ವಾದನ, ಸಾಂಸ್ಕøತಿಕ ಕಾರ್ಯಕ್ರಮ ಹಾಗೂ ಶುಭ ಶ್ರೀಯವರಿಂದ ‘ವಯಲಿನ್’ ವಾದನ ಆಯೋಜಿಸಲಾಗಿತ್ತು. ಕಾರ್ಯಕ್ರಮವನ್ನು ತೃತೀಯ ಬಿ.ಎ.ಸ್ಸಿ ವಿದ್ಯಾರ್ಥಿನಿ ಅವನಿ ನಿರ್ವಹಿಸಿದರು.

ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು