Tuesday, September 1, 2026
ಸುದ್ದಿ

ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನಲ್ಲಿ ಕ್ಯಾಂಪಸ್ ನೇಮಕಾತಿ ಪ್ರಕ್ರಿಯೆ- ಕಹಳೆ ನ್ಯೂಸ್

DCIM100MEDIADJI_0028.JPG

ಪುತ್ತೂರು: ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಗೆ ಈ ಶೈಕ್ಷಣಿಕ ವರ್ಷದಲ್ಲಿ ಇದುವರೆಗೆ ಒಟ್ಟು 22 ಕಂಪೆನಿಗಳು ನೇಮಕಾತಿಗಾಗಿ
ಆಗಮಿಸಿದ್ದವು. ಇದರಲ್ಲಿ 7 ಕಂಪೆನಿಗಳ ಪ್ರಕ್ರಿಯೆಯನ್ನು ಮುಗಿದಿದ್ದು ಒಟ್ಟು 34 ವಿದ್ಯಾರ್ಥಿಗಳು ಆಯ್ಕೆಗೊಂಡಿದ್ದಾರೆ. ಉಳಿದ 15 ಕಂಪೆನಿಗಳ ಪ್ರಕ್ರಿಯೆಯು ಚಾಲ್ತಿಯಲ್ಲಿದ್ದು ಇನ್ನೂ ಪೂರ್ಣಗೊಂಡಿಲ್ಲ. ಸೆಪ್ಟೆಂಬರ್ ತಿಂಗಳಲ್ಲಿ 8 ಕಂಪೆನಿಗಳು ನೇಮಕಾತಿಗಾಗಿ ಆಗಮಿಸಲಿದ್ದೂ ದಿನಾಂಕ ನಿಗದಿಗೊಂಡಿದೆ.. ಇದಲ್ಲದೆ ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಕಂಪೆನಿಗಳು ಆಗಮಿಸಲಿದ್ದು, ವಿದ್ಯಾರ್ಥಿಗಳ ನೇಮಕಾತಿ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಲಿವೆ. ಕಾಲೇಜಿನ ತರಬೇತಿ ಮತ್ತು ನೇಮಕಾತಿ ವಿಭಾಗವು ಕಂಪೆನಿಗಳೊಂದಿಗೆ ನಿರಂತರ ಸಂಪರ್ಕವನ್ನು
ಸಾಧಿಸುತ್ತಿದ್ದು ಎಲ್ಲಾ ಅರ್ಹ ವಿದ್ಯಾರ್ಥಿಗಳನ್ನು ನೇಮಕಾತಿಗೊಳಿಸುವ ಕಾರ್ಯದಲ್ಲಿ ನಿರತವಾಗಿದೆ ಎಂದು ಪ್ರಾಂಶುಪಾಲ ಡಾ,.ಮಹೇಶ್‍ಪ್ರಸನ್ನ.ಕೆ ತಿಳಿಸಿದ್ದಾರೆ

ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು