Thursday, September 3, 2026
ಸುದ್ದಿಹಾಸನ

ಸಾರಿಗೆ ಬಸ್, ಪಿಕಪ್ ವಾಹನದ ನಡುವೆ ಭೀಕರ ಅಪಘಾತ – ಓರ್ವ ಸಾವು, ನಾಲ್ವರಿಗೆ ಗಾಯ – ಕಹಳೆ ನ್ಯೂಸ್

ಹಾಸನ: ಸಾರಿಗೆ ಬಸ್ ಹಾಗೂ ಬೊಲೆರೋ ಪಿಕಪ್ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಸ್ಥಳದಲ್ಲೇ ಓರ್ವ ಸಾವನ್ನಪ್ಪಿದ್ದು, ನಾಲ್ವರು ಗಂಭೀರ ಗಾಯಗೊಂಡಿರುವ ಘಟನೆ ಹಾಸನ ಜಿಲ್ಲೆ, ಸಕಲೇಶಪುರ  ತಾಲೂಕಿನ ಮಾರನಹಳ್ಳಿ ಸಮೀಪ ನಡೆದಿದೆ.

ಜಾಹೀರಾತು

ದಿನೇಶ್ (38) ಸ್ಥಳದಲ್ಲೇ ಸಾವನ್ನಪ್ಪಿದ ವ್ಯಕ್ತಿ. ಸುಬ್ರಮಣ್ಯ, ವೆಂಕಟರಮಣ, ಜಿತೇಂದ್ರ ಹಾಗೂ ದುರ್ಗಾಪ್ರಸಾದ್ ಘಟನೆಯಲ್ಲಿ ಗಾಯಗೊಂಡಿದ್ದಾರೆ. ಐಸಿಐಸಿಐ ಬ್ಯಾಂಕ್‌ಗೆ ಸೇರಿದ ಬೊಲೆರೋ ಪಿಕಪ್ ವಾಹನ ಎಟಿಎಂಗಳಿಗೆ ಹಣ ತುಂಬಲು ಬರುತ್ತಿತ್ತು. ಈ ವೇಳೆ ಮಂಗಳೂರಿನಿಂದ ಬೆಂಗಳೂರು ಕಡೆಗೆ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ (KSRTC Bus) ಹಾಗೂ ಪಿಕಪ್ ನಡುವೆ ಅಪಘಾತ ಸಂಭವಿಸಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಗಾಯಾಳುಗಳು ಕೊಡಗು ಹಾಗೂ ಮಂಗಳೂರು ಮೂಲದವರು. ಸದ್ಯ ಗಾಯಾಳುಗಳಿಗೆ ಸಕಲೇಶಪುರ ಕ್ರಾಫರ್ಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸಕಲೇಶಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.