Friday, September 4, 2026
ಬೆಂಗಳೂರುಸುದ್ದಿ

ಸೆ.21ರಿಂದ ಮೂರು ದಿನಗಳ ಕಾಲ ವಿಶೇಷ ಅಧಿವೇಶನ – ಕಹಳೆ ನ್ಯೂಸ್

ಬೆಂಗಳೂರು: ಸೆ.21ರಿಂದ ಮತ್ತೆ ಮೂರು ದಿನಗಳ ಕಾಲ ವಿಶೇಷ ಅಧಿವೇಶನ (Special Session) ನಡೆಸಲು ಸಚಿವ ಸಂಪುಟದಲ್ಲಿ ಒಪ್ಪಿಗೆ ನೀಡಲಾಗಿದೆ.

ಜಾಹೀರಾತು

ಸಿಎಂ ಡಿಕೆ ಶಿವಕುಮಾರ್ (DK Shivakumar) ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ವಿಶೇಷ ಅಧಿವೇಶನಕ್ಕೆ ಒಪ್ಪಿಗೆ ನೀಡಲಾಗಿದೆ. ಸೆಪ್ಟೆಂಬರ್ 21ರಿಂದ ಸೆಪ್ಟೆಂಬರ್ 23ರವರೆಗೆ ಒಟ್ಟು ಮೂರು ದಿನಗಳ ಕಾಲ ವಿಶೇಷ ಅಧಿವೇಶನ ನಡೆಯಲಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಈ ಮೊದಲು ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ದುರ್ಬಳಕೆ ಪ್ರಕರಣದಲ್ಲಿ ಸಚಿವ ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ಹೋರಾಟ ಮುಂದುವರೆಸಿತ್ತು. ಅಲ್ಲದೇ ಅಹೋರಾತ್ರಿ ಧರಣಿಗೂ ಸಿದ್ಧತೆ ನಡೆಸಿತ್ತು. ಈ ಮಧ್ಯೆಯೇ ಮೂರು ದಿನ ಮೊದಲೇ ವಿಧಾನಮಂಡಲದ ಕಲಾಪ ಅನಿರ್ದಿಷ್ಟಾವಧಿಗೆ ಮುಂದೂಡಿಕೆ ಮಾಡಲಾಗಿತ್ತು. ಇದೀಗ ಮತ್ತೆ ಮೂರು ದಿನಗಳ ಕಾಲ ವಿಶೇಷ ಅಧಿವೇಶನ ನಡೆಯಲಿದ್ದು, ಕಸ್ತೂರಿ ರಂಗನ್ ವರದಿ ಹಾಗೂ ಬರದ ಬಗ್ಗೆ ಚರ್ಚೆ ನಡೆಯಲಿದೆ.