
ಕಡಬ ಸರಸ್ವತೀ ಆಂಗ್ಲ ಮಾಧ್ಯಮ ಶಾಲೆ ಹನುಮಾನ್ ನಗರ ಕಡಬ ಇಲ್ಲಿ ಶಿಕ್ಷಕರ ದಿನಾಚರಣೆ ಕಾರ್ಯಕ್ರಮವು ಜರಗಿತು. ಕಾರ್ಯಕ್ರಮದಲ್ಲಿ ನಿವೃತ್ತ ಶಿಕ್ಷಕರಾದ ಶ್ರೀ ಸುಂದರ ಗೌಡ ಪಣೆಮಜಲು ಇವರಿಗೆ ಸನ್ಮಾನ ಕಾರ್ಯಕ್ರಮವು ನಡೆಯಿತು. ಮುಖ್ಯ ಅತಿಥಿಗಳಾಗಿ ಆಗಮಿಸಿದ ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು ಇದರ ಸಹ ಕಾರ್ಯ ನಿರ್ವಹಣಾಧಿಕಾರಿಯಾದ ಶ್ರೀ ವೆಂಕಟ್ರಮಣ ರಾವ್ ಮಂಕುಡೆ ಇವರು ಶಿಕ್ಷಕರು ಕ್ರೀಯಾಶೀಲರಾಗಬೇಕು ಹಾಗೂ ಎಲ್ಲಾ ಮಕ್ಕಳಿಗೆ ಸಮಾನವಾದ ಶಿಕ್ಷಣವನ್ನು ನೀಡಿದಾಗ ಮಾತ್ರ ಉತ್ತಮ ಶಿಕ್ಷಕರರಾಗಲು ಸಾಧ್ಯ ಎಂದು ಹೇಳಿದರು. ವೇದಿಕೆಯಲ್ಲಿ ಸಂಸ್ಥೆಯ ಆಡಳಿತ ಮಂಡಳಿ ಅಧ್ಯಕ್ಷರಾದ ಶ್ರೀ ಸದಾಶಿವ ಭಟ್, ಮಾತೃಮಂಡಳಿ ಅಧ್ಯಕ್ಷರಾದ ಶ್ರೀಮತಿ ಜಯಶ್ರೀ
ಪಡೆಜ್ಜಾರು, ಮುಖ್ಯಗುರುಗಳಾದ ಶ್ರೀ ವಸಂತ ಕೆ. ಇವರು ಉಪಸ್ಥಿತರಿದ್ದರು. ಸಭಾ ಕಾರ್ಯಕ್ರಮದ ನಂತರ ಸಂಸ್ಥೆಯ ಮಾತೃಮಂಡಳಿ ಸದಸ್ಯರು ಮತ್ತು ವಿದ್ಯಾರ್ಥಿಗಳು ಶಿಕ್ಷಕರಿಗೆ ವಿವಿಧ ಆಟೋಟ ಸ್ಪರ್ಧೆಗಳನ್ನು ಏರ್ಪಡಿಸಿ, ವಿಜೇತರಾದವರಿಗೆ ಬಹುಮಾನ ವಿತರಿಸಿದರು.











