Saturday, September 5, 2026
ಸುದ್ದಿ

ಮರ್ದಾಳದ ಕುಂಡಡ್ಕ ಫಾಲ್ಸ್ ಗೆ ಸಂಬಂಧಿಸಿದ ಹಿಂದೂ ಪರ ಸಂಘಟನೆಯ ಕಾರ್ಯಕರ್ತರ ವಿರುದ್ಧ ದಾಖಲಾಗಿದ್ದ ಪ್ರಕರಣಕ್ಕೆ ಹೈಕೋರ್ಟ್ ತಡೆ ; ಹಿರಿಯ ನ್ಯಾಯವಾದಿ ಡಾ. ಅರುಣ್ ಶ್ಯಾಮ್ ವಾದ – ಕಹಳೆ ನ್ಯೂಸ್

ಕಡಬ ಬಂಟ್ರ ಗ್ರಾಮದ ಮರ್ದಾಳ ಕುಂಡಡ್ಕ ಫಾಲ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದೂಪರ ಸಂಘಟನೆಗಳ ಕಾರ್ಯಕರ್ತರ ವಿರುದ್ಧ ಕಡಬ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ತಡೆ ನೀಡಿದೆ.

ಜಾಹೀರಾತು

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇತ್ತೀಚಿಗೆ ಹಲವಾರು ಅನುಮಾನಗಳು ವ್ಯಕ್ತವಾಗಿದ್ದವು, ಅದರಲ್ಲೂ ದಲಿತ ದೌರ್ಜನ್ಯ ಕಾಯ್ದೆಯ ದುರುಪಯೋಗಗೊಂಡ ಬಗ್ಗೆ ಸಾರ್ವಜನಿಕ ವಲಯದಲ್ಲಿ ತೀವ್ರ ಅಸಮಾನದನಕ್ಕೆ ಕಾರಣವಾಗಿದೆ, ಅದರಲ್ಲೂ ದಲಿತ ಸಮುದಾಯಕ್ಕೆ ಸೇರಿದ ಹಿಂದೂಪರ ಸಂಘಟನೆಯಲ್ಲಿ ತೊಡಗಿಕೊಂಡಿದ್ದ ಓರ್ವ ದಲಿತನ ವಿರುದ್ಧವೇ ಈ ಕಾಯಿದೆ ದೂರು ದಾಖಲಾಗಿದ್ದು ತೀವ್ರ ಆಕ್ರೋಶಕ್ಕೂ ಕಾರಣವಾಗಿತ್ತು. ಸದ್ರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಮೊರೆ ಹೋಗಿದ್ದು, ಅರ್ಜಿದಾರರ ಪರ ಹೈಕೋರ್ಟ್ ಹಿರಿಯ ನ್ಯಾಯವಾದಿ ಡಾ. ಅರುಣ್ ಶ್ಯಾಮ್ ವಾದ ಮಂಡಿಸಿದ ವಾದ ಆಲಿಸಿದ ನ್ಯಾಯಮೂರ್ತಿ ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ ಪ್ರಕರಣ ತಡೆ ನೀಡಿ ಮಹತ್ವದ ಆದೇಶ ಮಾಡಿದೆ. ಸುಯೋಗ್ ಹೇರಳೆ ವಕಾಲತ್ತು ವಹಿಸಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು