Sunday, September 6, 2026
ಸುದ್ದಿ

ಕಡಬದ ಸರಸ್ವತೀ ವಿದ್ಯಾಲಯ ಪ್ರೌಢಶಾಲೆಯಲ್ಲಿ ಶಿಕ್ಷಕರ ದಿನಾಚರಣೆ – ಕಹಳೆ ನ್ಯೂಸ್

ಕಡಬದ ಸರಸ್ವತೀ ವಿದ್ಯಾಲಯ ಪ್ರೌಢಶಾಲೆಯಲ್ಲಿ ಸೆಪ್ಟೆಂಬರ್ 5ರಂದು ಶಿಕ್ಷಕರ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ಸಂಸ್ಥೆಯ
ಸಂಚಾಲಕಿ ಶ್ರೀಮತಿ ಸವಿತಾ ಶಿವಸುಬ್ರಮಣ್ಯ ಭಟ್ ವಹಿಸಿ ಶಿಕ್ಷಕ ದಿನಾಚರಣೆಯ ಮಹತ್ವವನ್ನು ತಿಳಿಸಿದರು. ವಿದ್ಯಾರ್ಥಿಗಳಾದ ಎನ್ ಕೆ ಯಶ್ವಿತ್ ಹಾಗೂ ನಿರೀಕ್ಷಾ ಎಸ್ ಮತ್ತು ಮುಖ್ಯ ಶಿಕ್ಷಕಿ ಶ್ರೀಮತಿ ಶೈಲಶ್ರೀ ರೈ ಎಸ್ ಅನಿಸಿಕೆಯನ್ನು ವ್ಯಕ್ತಪಡಿಸಿದರು.

ಜಾಹೀರಾತು

ದಿನಾಚರಣೆಯ ಅಂಗವಾಗಿ ವಿದ್ಯಾರ್ಥಿಗಳು ಶಿಕ್ಷಕರಿಗೆ ವಿವಿಧ ಮನರಂಜನೆಯ ಆಟಗಳನ್ನು ಏರ್ಪಡಿಸಿದ್ದರು. ಕಾರ್ಯಕ್ರಮದಲ್ಲಿ ಇದರ ಬಹುಮಾನ ವಿತರಣೆಯನ್ನು ದಿಗಂತ್
ವಾಚಿಸಿದರು. ಸಂಸ್ಥೆಯ ಮಾತೃಭಾರತೀಯ ವತಿಯಿಂದ ಶಿಕ್ಷಕ ಹಾಗೂ ಶಿಕ್ಷಕೇತರ ವೃಂದದವರನ್ನು ಸ್ಮರಣಿಕೆ ನೀಡಿ ಗೌರವಿಸಲಾಯಿತು. ವೇದಿಕೆಯಲ್ಲಿ ಮುಖ್ಯ ಶಿಕ್ಷಕಿ, ಶಿಕ್ಷಕ ಹಾಗೂ ಶಿಕ್ಷಕೇತರ ವೃಂದದವರು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಮಾತೃಭಾರತೀಯ ಸದಸ್ಯರು ಉಪಸ್ಥಿತರಿದ್ದರು. ವಿದ್ಯಾರ್ಥಿನಿ ಗೌತಮಿ ಎಸ್.ಎಲ್ ಸ್ವಾಗತಿಸಿ, ಕೀರ್ತಿ ಜೆ.ರೈ ವಂದಿಸಿದರು. ಕುಮಾರಿ ಹರಿಪ್ರಿಯಾ ಹರಿದಾಸ್ ಕಾರ್ಯಕ್ರಮ ನಿರೂಪಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು