ಪುತ್ತೂರುದ ಪಿಲಿಗೊಬ್ಬು 2026ಕ್ಕೆ ಭರ್ಜರಿ ಸಿದ್ಧತೆ : ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಆಮಂತ್ರಣ ಪತ್ರಿಕೆ ಬಿಡುಗಡೆ – ಕಹಳೆ ನ್ಯೂಸ್

ಪುತ್ತೂರು: ಕರಾವಳಿಯ ಸಾಂಪ್ರದಾಯಿಕ ಹುಲಿವೇಷದ ಸೊಬಗನ್ನು ಅನಾವರಣಗೊಳಿಸುವ ‘ಪುತ್ತೂರುದ ಪಿಲಿಗೊಬ್ಬು 2026’ ಸೀಸನ್–4ಕ್ಕೆ ಪುತ್ತೂರು ಸಜ್ಜಾಗುತ್ತಿದೆ. ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಇಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬಿಡುಗಡೆಗೊಳಿಸಲಾಯಿತು.
ವಿಜಯ ಸಾಮ್ರಾಟ್ (ರಿ.) ಪುತ್ತೂರು ಇದರ ಆಶ್ರಯದಲ್ಲಿ ಹಾಗೂ ಸಹಜ್ ರೈ ಬಳಜ್ಜ ಅವರ ಮುಂದಾಳತ್ವದಲ್ಲಿ ಅಕ್ಟೋಬರ್ 17ರಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಗದ್ದೆಯಲ್ಲಿ ಪುತ್ತೂರುದ ಪಿಲಿಗೊಬ್ಬು 2026 ನಡೆಯಲಿದೆ.
ಆಮಂತ್ರಣ ಪತ್ರಿಕೆ ಬಿಡುಗಡೆಗೂ ಮುನ್ನ ಶ್ರೀ ಮಹಾಲಿಂಗೇಶ್ವರ ದೇವರಿಗೆ ವಿಶೇಷ ಪೂಜೆ ಹಾಗೂ ಪ್ರಾರ್ಥನೆ ಸಲ್ಲಿಸಲಾಯಿತು. ಬಳಿಕ ಶಶಾಂಕ್ ನೆಲ್ಲಿತ್ತಾಯ ಅವರು ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿದರು.
ಕಾರ್ಯಕ್ರಮದಲ್ಲಿ ವಿಜಯ ಸಾಮ್ರಾಟ್ (ರಿ.) ಪುತ್ತೂರು ಇದರ ಸ್ಥಾಪಕ ಅಧ್ಯಕ್ಷರಾದ ಸಹಜ್ ರೈ ಬಳಜ್ಜ ಹಾಗೂ ವಿಜಯ ಸಾಮ್ರಾಟ್ ತಂಡದ ಸದಸ್ಯರು ಉಪಸ್ಥಿತರಿದ್ದರು.
ಪುತ್ತೂರುದ ಪಿಲಿಗೊಬ್ಬು 2026ರ ಸೀಸನ್–4ನ್ನು ಅದ್ಧೂರಿಯಾಗಿ ಆಯೋಜಿಸಲು ಈಗಾಗಲೇ ಸಿದ್ಧತೆಗಳು ಆರಂಭಗೊಂಡಿದ್ದು, ಅಕ್ಟೋಬರ್ 17ರಂದು ನಡೆಯಲಿರುವ ಕಾರ್ಯಕ್ರಮದತ್ತ ಎಲ್ಲರ ಚಿತ್ತ ನೆಟ್ಟಿದೆ.











