Recent Posts

Tuesday, September 8, 2026
ಕಾರ್ಕಳಜಿಲ್ಲೆಸುದ್ದಿ

ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಯಲ್ಲಿ   ಶಿಕ್ಷಕರ ದಿನಾಚರಣೆ :ನಿವೃತ್ತ ಶಿಕ್ಷಕರಿಗೆ ಸನ್ಮಾನ – ಕಹಳೆ ನ್ಯೂಸ್

ಕಾರ್ಕಳ  : ವಿದ್ಯಾರ್ಥಿ ಜೀವನ ಉತ್ತಮಗೊಳ್ಳಲು ಗುರುಗಳ ಮಾರ್ಗದರ್ಶನ ಅವಶ್ಯಕ ಸಾಧಕನೊಬ್ಬನ ಸಾಧನೆಯ ಹಿಂದಿನ ಗುಟ್ಟು ಶಿಕ್ಷಕನೇ ಆಗಿರುತ್ತಾನೆ. ಅಂತಹ ಪ್ರೇರಣೆಯನ್ನು 
ಜ್ಞಾನಸುಧಾದ ಮಕ್ಕಳು ಇಂತಹ ಕಾರ್ಯಕ್ರಮದ ಮೂಲಕ ಪಡೆಯುತ್ತಿರುವುದು ಪ್ರಶಂಸನೀಯ ಎಂದು ಮಾಹೆ ಮಣಿಪಾಲದ ಕಾಲೇಜ್ ಆಫ್ ಡೆಂಟಲ್ ಸೈನ್ಸಸ್ ಮತ್ತು ಡಿರ್ಪಾಟ್‌ಮೆಂಟ್ ಆಫ್ ಪಬ್ಲಿಕ್ ಹೆಲ್ತ್ ಡೆಂಟಿಸ್ಟಿç ವಿಭಾಗದ ಫ್ರೋಪೆಸರ್ ಹಾಗೂ ಮುಖ್ಯಸ್ಥರಾದ ಡಾ. ಕಲ್ಯಾಣ ಪೆಂಟಪತಿ ನುಡಿದರು.
ಅವರು ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳಲ್ಲಿ  ಜರುಗಿದ ಶಿಕ್ಷಕರ ದಿನಾಚರಣೆ ಸಮಾರಂಭದಲ್ಲಿ ತಾಲೂಕಿನ ಐವರು ನಿವೃತ್ತ ಶಿಕ್ಷಕರನ್ನು ಗೌರವಿಸಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಸನ್ಮಾನಿತರಾದ ನಿವೃತ್ತ ಶಿಕ್ಷಕರಾದ ಶ್ರೀ ರಾಮಕೃಷ್ಣ ಹೆಬ್ಬಾರ್ ಹಾಗೂ ನಿವೃತ್ತ ಮುಖ್ಯ ಶಿಕ್ಷಕ ಶ್ರೀ ಸಂಜೀವ ದೇವಾಡಿಗ ಮಾತನಾಡಿದರು.

ಜಾಹೀರಾತು

ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಅಜೆಕಾರು ಪದ್ಮಗೋಪಾಲ್ ಎಜುಕೇಶನ್ ಟ್ರಸ್ಟಿನ ಅಧ್ಯಕ್ಷರಾಧ ಡಾ. ಸುಧಾಕರ್ ಶೆಟ್ಟಿಯವರು ಮಾತನಾಡಿ, ನಮ್ಮ ಬದುಕಿನಲ್ಲಿ ನಡೆದು ಬಂದ ಹಾದಿಯಲ್ಲಿ ಪ್ರಾಥಮಿಕ ಶಿಕ್ಷಕರ ಪಾತ್ರ ಬಹುದೊಡ್ಡದು. ಅವರ ತ್ಯಾಗ ಮತ್ತು ಸಹನ ಶೀಲತೆ ಎಲ್ಲರಿಗೂ ಮಾದರಿ ಎಂದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಶಿರ್ಲಾಲು ಎನ್. ಎನ್. ರಾವ್ ಮೆಮೊರಿಯಲ್ ಪ್ರೌಢಶಾಲೆಯ ನಿವೃತ್ತ ಶಿಕ್ಷಕ ಶ್ರೀ ರಾಮಕೃಷ್ಣ ಹೆಬ್ಬಾರ್, ಎಣ್ಣೆಹೊಳೆ ಸರಕಾರಿ ಪ್ರಾಥಮಿಕ ಶಿಕ್ಷಕಿ ಶ್ರೀಮತಿ ಚಂಪಾ ಡಿ. ಹೆಗ್ಡೆ, ಮಿಯ್ಯಾರು
ಸರಕಾರಿ ಉನ್ನತ್ತಿಕಾರಿಸಿದ ಹಿರಿಯ ಪ್ರಾಥಮಿಕ ಶಾಲೆಯ ನಿವೃತ್ತ ಮುಖ್ಯ ಶಿಕ್ಷಕ ಶ್ರೀ ಸಂಜೀವ ದೇವಾಡಿಗ, ರೆಂಜಾಳದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ನಿವೃತ್ತ ದೈಹಿಕ ಶಿಕ್ಷಕ ಶ್ರೀ ಅಣ್ಣಿ ಎಮ್. ಹಾಗೂ ಶಿರ್ಲಾಲು ಸೂಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ  ನಿವೃತ್ತ ದೈಹಿಕ ಶಿಕ್ಷಕಿ ಶ್ರೀಮತಿ ಶಶಿಕಲಾ ದೇವಿ ಇವರುಗಳನ್ನು ಅಜೆಕಾರು ಪದ್ಮಗೋಪಾಲ್ ಎಜುಕೇಶನ್ ಟ್ರಸ್ಟ್ ಹಾಗೂ ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ವತಿಯಿಂದ ಗುರುತಿಸಿ ಗೌರವಿಸಲಾಯಿತು.

ಇದೇ ಸಂದರ್ಭ, ಟ್ರಸ್ಟಿಗಳಾದ ಶ್ರೀಮತಿ ವಿದ್ಯಾವತಿ ಎಸ್. ಶೆಟ್ಟಿ ಹಾಗೂ ಅನಿಲ್ ಕುಮಾರ್ ಜೈನ್, ಕಾರ್ಕಳ ಜ್ಞಾನಸುಧಾ ಆಂಗ್ಲ ಮಾಧ್ಯಮ ಶಾಲೆಯ ಉಪ ಪ್ರಾಂಶುಪಾಲೆಯಾದ ಶ್ರೀಮತಿ ವಾಣಿ ಕೆ, ಕಾರ್ಕಳ ಜ್ಞಾನಸುಧಾ ಕಾಲೇಜಿನ ಉಪಪ್ರಾಂಶುಪಾಲರಾದ ಶ್ರೀ ಸಾಹಿತ್ಯ, ಪಿ.ಆರ್.ಒ. ಜ್ಯೋತಿ ಪದ್ಮನಾಭ ಬಂಡಿ, ಹಾಗೂ ಹಿರಿಯರಾದ ಸಂಸ್ಥೆಯ ಹಿತೈಷಿ ಅಪ್ರಾಯ ಕಿಣಿ ಉಪಸ್ಥಿತರಿದ್ದರು.

ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಸಿ.ಇ.ಒ. ಮತ್ತು ಪ್ರಾಂಶುಪಾಲರಾದ ಶ್ರೀ ದಿನೇಶ್ ಎಂ. ಕೊಡವೂರು ಸ್ವಾಗತಿಸಿ, ಆಂಗ್ಲಭಾಷಾ ವಿಭಾಗದ ಮುಖ್ಯಸ್ಥೆ ಶ್ರೀಮತಿ ಸಂಗೀತಾ ಕುಲಾಲ್ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.