
ಮಂಗಳೂರು: ನ್ಯಾಯಾಲಯಕ್ಕೆ ಹಾಜರಾಗದೆ 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂದಿಸಿದ್ದಾರೆ. ಉಳ್ಳಾಲ ಮುಕ್ಕಚೇರಿ ಕಿಲೇರಿಯಾ ನಗರ ನಿವಾಸಿ ಅಶ್ವಾಕ್ (34) ಬಂಧಿತ ಆರೋಪಿ.
ಈತನ ವಿರುದ್ಧ ಮಂಗಳೂರು ಉತ್ತರ ಪೊಲೀಸ್ ಠಾಯಲ್ಲಿ 2017ರಲ್ಲಿ ಪ್ರಕರಣ ದಾಖಲಾಗಿದ್ದು, 2ನೇ ಜೆ.ಎಂ.ಎಫ್.ಸಿ ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿದೆ. ಆದರೆ ಆರೋಪಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ. ನ್ಯಾಯಾಲಯವು ಆರೋಪಿಗೆ ಎಲ್ ಪಿ ಸಿ ವಾರೆಂಟ್ ಹೊರಡಿಸಿತ್ತು.
ಸೆ.8ರಂದು ಮಂಗಳೂರು ಉತ್ತರ ಪೊಲೀಸ್ ಠಾಣೆಯ ಅಧಿಕಾರಿ ಮತ್ತು ಸಿಬಂದಿ ಆತನನ್ನು ಪತ್ತೆ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಧೀಶರು ನ್ಯಾಯಾಂಗ ಬಂಧನ ವಿಧಿಸಿದ್ದಾರೆ











