Thursday, September 10, 2026
ಸುದ್ದಿ

ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಪದ್ಮರಾಜ್ ಆರ್‌. ಪೂಜಾರಿ ನೇಮಕ – ಕಹಳೆ ನ್ಯೂಸ್

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಪದ್ಮರಾಜ್ ಆರ್ ಪೂಜಾರಿ ಅವರನ್ನ ನೇಮಕ ಮಾಡಲಾಗಿದೆ.ರಾಜ್ಯದ ವಿವಿಧ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ನೇಮಕಾತಿ ಪಟ್ಟಿಯನ್ನು ಸಂಸದ, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರು ಪ್ರಕಟಣೆ ಹೊರಡಿಸಿದ್ದು, ಈ ನೇಮಕಾತಿ ತತ್‌ಕ್ಷಣದಿಂದಲೇ ಜಾರಿಗೆ ಬರಲಿದೆ.

ಜಾಹೀರಾತು

ಸಂಘಟನ್ ಸೃಜನ್ ಅಭಿಯಾನದ ಭಾಗವಾಗಿ ಈ ನೇಮಕಾತಿ ನಡೆದಿದೆ. ಈ ಅಭಿಯಾನದಡಿ ದಕ್ಷಿಣ ಕನ್ನಡ ಜಿಲ್ಲೆಗೆ ನಿಯೋಜಿಸಲಾಗಿದ್ದ ಎಐಸಿಸಿ ವೀಕ್ಷಕರು ಪಕ್ಷದ ಪದಾಧಿಕಾರಿಗಳು ಚರ್ಚೆ ನಡೆಸಿ, ಸಂಘಟನೆಯ ಕುರಿತು ಸಮಗ್ರ ವರದಿ ಸಲ್ಲಿಸಿದ್ದರು. ಈ ವರದಿಗಳನ್ನು ಸಲ್ಲಿಸಿದ ಬಳಿಕ, ಒಬ್ಬೊಬ್ಬರೊಂದಿಗೆ ವೈಯಕ್ತಿಕವಾಗಿ ಸಮಲೋಚನೆ ನಡೆಸಲಾಗುತ್ತದೆ ಮತ್ತು ಹಿರಿಯ ನಾಯಕರೊಂದಿಗೆ ಮಾತುಕತೆ ನಡೆಸಲಾಗುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಿಲ್ಲೆಯಲ್ಲಿ ಪಕ್ಷದ ಸಂಘಟನೆ ಬಲಪಡಿಸುವುದು, ತಳಮಟ್ಟದಲ್ಲಿ ಪಕ್ಷದ ಕಾರ್ಯಕರ್ತರನ್ನು ಸಕ್ರಿಯಗೊಳಿಸುವುದು ಹಾಗೂ ಮುಂಬರುವ ರಾಜಕೀಯ ಚಟುವಟಿಕೆಗಳಿಗೆ ಪಕ್ಷವನ್ನು ಸಜ್ಜುಗೊಳಿಸುವ ಜವಾಬ್ದಾರಿ ನೂತನ ಜಿಲ್ಲಾಧ್ಯಕ್ಷರ ಮೇಲಿದೆ.