ಬಪ್ಪಳಿಗೆ ಅಂಬಿಕಾ ಸಿಬಿಎಸ್‍ಇ ವಿದ್ಯಾಲಯದ ವಿದ್ಯಾರ್ಥಿಗಳು ರಾಷ್ಟ್ರಮಟ್ಟದ ಕರಾಟೆ ಸ್ಪರ್ಧೆಗೆ ಆಯ್ಕೆ – ಕಹಳೆ ನ್ಯೂಸ್

ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿಬಿಎಸ್‍ಇ ವಿದ್ಯಾಲಯದ ವಿದ್ಯಾರ್ಥಿಗಳು ಬೆಂಗಳೂರಿನ ರಾಮಮೂರ್ತಿ ನಗರದ ರಾಷ್ಟ್ರೋತ್ಥಾನ ವಿದ್ಯಾ ಕೇಂದ್ರದಲ್ಲಿ ನಡೆದ ರಾಜ್ಯ ಮತ್ತು ಕ್ಷೇತ್ರ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಭಾಗವಹಿಸಿ ಅತ್ಯುತ್ತಮ ಸಾಧನೆ ಮಾಡಿ ಹಲವು ಪದಕಗಳನ್ನು ಗೆಲ್ಲುವ ಜೊತೆಗೆ
ರಾಷ್ಟ್ರಮಟ್ಟದ ಕರಾಟೆ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.
17ರ ವಯೋಮಾನದ ಬಾಲಕಿಯರ ವಿಭಾಗದಲ್ಲಿ ಬೆಟ್ಟಂಪಾಡಿ ನಿವಾಸಿ ಸುರೇಶ್ ಗೌಡ ಸರಳಿಕಾನ ಮತ್ತು ವಿದ್ಯಾಶ್ರೀ ದಂಪತಿಯ ಪುತ್ರಿ 10ನೇ ತರಗತಿಯ ದೃಶಾನ ಎಸ್. ಸರಳಿಕಾನ -52 ಕೆ.ಜಿ. ವಿಭಾಗದ ಕರಾಟೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ, ವಿಟ್ಲ ನೀರಕಣಿ ನಿವಾಸಿ ಸುನಿಲ್ ರಾಜ್ ಮತ್ತು ಬಿ. ಬಿ. ವಿದ್ಯಾ ದಂಪತಿಯ ಪುತ್ರಿ 9ನೇ ತರಗತಿಯ ನಿಹಾರಿಕಾ ಕೆ. ಎಸ್. -56 ಕೆಜಿ ವಿಭಾಗದ ಕರಾಟೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ, 14ರ ವಯೋಮಾನದ ಬಾಲಕಿಯರ ವಿಭಾಗದಲ್ಲಿ ಪುತ್ತೂರಿನ ಹೆಬ್ಬಾರಬೈಲು ನಿವಾಸಿ ವಿಶಾಲ್ ಮತ್ತು ಭೂಮಿ ದಂಪತಿಯ ಪುತ್ರಿ 8ನೇ ತರಗತಿಯ ಪ್ರಾರ್ಥನಾ – 46 ಕೆಜಿ ವಿಭಾಗದ ಕರಾಟೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಷ್ಟ್ರಮಟ್ಟದ ಕರಾಟೆ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.











