Friday, September 11, 2026
ಸುದ್ದಿ

ಮಂಗಳೂರು ವಿ.ವಿ ಮಟ್ಟದ ಕರಾಟೆ ಸ್ಪರ್ಧೆ: ವಿವೇಕಾನಂದ ಕಾಲೇಜಿನ ವಿದ್ಯಾರ್ಥಿಗಳು ರಾಷ್ಟ್ರಮಟ್ಟಕ್ಕೆ ಆಯ್ಕೆ – ಕಹಳೆ ನ್ಯೂಸ್

ಪುತ್ತೂರು: ಉಡುಪಿಯ ತೆಂಕನಿಡಿಯೂರಿನ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜರುಗಿದ 2026-27ನೇ ಸಾಲಿನ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಪುತ್ತೂರಿನ ವಿವೇಕಾನಂದ ಕಾಲೇಜು 2 ಚಿನ್ನ, 1 ಬೆಳ್ಳಿ ಮತ್ತು 2 ಕಂಚಿನ ಪದಕಗಳನ್ನು ಗಳಿಸಿದೆ. ಪ್ರಥಮ ಎಂಕಾಂ ವಿದ್ಯಾರ್ಥಿ ಅಭಯ ಕೃಷ್ಣ. ಟಿ ಕಟಾ ತಂಡ ವಿಭಾಗ ಮತ್ತು ಕುಮಿಟೆ ವೈಯುಕ್ತಿಕ ವಿಭಾಗದಲ್ಲಿ ಚಿನ್ನದ ಪದಕ ಹಾಗೂ ಕಟಾ ವೈಯಕ್ತಿಕ ಮತ್ತು ಕುಮಿಟೆ ತಂಡ ವಿಭಾಗದಲ್ಲಿ ಕಂಚಿನ ಪದಕ ಪಡೆದುಕೊಂಡಿದ್ದಾರೆ.

ಜಾಹೀರಾತು

ತೃತೀಯ ಬಿಎ ವಿದ್ಯಾರ್ಥಿ ಅರುಣ್ ಕುಮಾರ್ ಎ ಆರ್, ಕಟಾ ತಂಡ ವಿಭಾಗದಲ್ಲಿ ಚಿನ್ನ, ಕುಮಿಟೆ ವೈಯಕ್ತಿಕ ವಿಭಾಗದಲ್ಲಿ ಬೆಳ್ಳಿ ಮತ್ತು ಕುಮಿಟೆ ತಂಡ ವಿಭಾಗದಲ್ಲಿ ಕಂಚಿನ ಪದಕ ಮತ್ತು ಪ್ರಥಮ ಬಿಕಾಂ ವಿದ್ಯಾರ್ಥಿ ನಿಖಿತ್, ಕಟಾ ತಂಡ ವಿಭಾಗದಲ್ಲಿ ಚಿನ್ನ ಮತ್ತು ಕುಮಿಟೆ ತಂಡ ವಿಭಾಗದಲ್ಲಿ ಕಂಚಿನ ಪದಕ, ದ್ವಿತೀಯ ಬಿಬಿಎ ವಿದ್ಯಾರ್ಥಿ ಭವಿμï ಕುಮಿಟೆ ತಂಡ ವಿಭಾಗದಲ್ಲಿ ಕಂಚಿನ ಪದಕ ಗಳಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಡಿಸೆಂಬರ್ ನಲ್ಲಿ ತಮಿಳುನಾಡಿನ ಚೆನೈನಲ್ಲಿ ನಡೆಯಲಿರುವ ದಕ್ಷಿಣ ಭಾರತ ಅಂತರ್ ವಿಶ್ವವಿದ್ಯಾನಿಲಯ ಮಟ್ಟದ ಸ್ಪರ್ಧೆಯಲ್ಲಿ ಮಂಗಳೂರು ವಿಶ್ವವಿದ್ಯಾನಿಲಯವನ್ನು ಪ್ರತಿನಿಧಿಸಲು ಈ ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿಗಳ ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ ಹಾಗೂ ಪ್ರಾಂಶುಪಾಲರು ಅಭಿನಂದಿಸಿದ್ದಾರೆ.