
ಮಂಗಳೂರು: ಕಳವು ಪ್ರಕರಣಕ್ಕೆ ಸಂಬಂಧಿಸಿ 5 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆ ಮರೆಸಿಕೊಂಡಿದ್ದ ಆಕಾಶ ಭವನದ ಆನಂದ ನಗರ ನಿವಾಸಿ ಲತಾ ಮಾರಿಯಾ (44) ಎಂಬಾಕೆಯನ್ನು ಕಾವೂರು ಪೊಲೀಸರು ಬಂಧಿಸಿದ್ದಾರೆ.
5 ವರ್ಷಗಳ ಹಿಂದೆ ಈಕೆ ಕೆಲಸ ಮಾಡುತ್ತಿದ್ದ ಮನೆಯಲ್ಲೇ ಕಳವುಗೈದು ಪೊಲೀಸರ ಕೈಗೆ ಸಿಗದೇ ನ್ಯಾಯಾಲಯಕ್ಕೂ ಹಾಜರಾಗದೆ ತಲೆ ಮರೆಸಿಕೊಂಡಿದಳು. ಹಿರಿಯ ಸಿಜೆ ಅಂಡ್ ಸಿ.ಜೆ.ಎಮ್ ನ್ಯಾಯಾಲಯವು ಆಕೆಯ ವಿರುದ್ಧ ಬಂಧನದ ವಾರಂಟ್ ಹೊರಡಿಸಿತ್ತು. ಈಕೆಯನ್ನು ಜ್ಯೋತಿ ನಗರದಲ್ಲಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ.











