Friday, September 11, 2026
ಸುದ್ದಿ

ಶ್ರೀರಾಮ ಪದವಿ ಪೂರ್ವ ವಿದ್ಯಾಲಯ VISTAARA 2K26 – COMMERCE FEST- ಕಹಳೆ ನ್ಯೂಸ್

ಶ್ರೀರಾಮ ಪದವಿ ಪೂರ್ವ ವಿದ್ಯಾಲಯದಲ್ಲಿ ವಾಣಿಜ್ಯ ಸಂಘದ ವತಿಯಿಂದ “VISTAARA 2k26 ” ಕಾಮರ್ಸ್ ಫೆಸ್ಟ್ ನ್ನು ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾಯಿತು. ಅತಿಥಿ ಅಭ್ಯಾಗತರು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ವಿಧ್ಯುಕ್ತವಾಗಿ ಚಾಲನೆ ನೀಡಿದರು. ನಂತರ ವಿದ್ಯಾರ್ಥಿಗಳು ತಯಾರಿಸಿದ ಎಟಿಎಂ ಮಾದರಿಯ ಮೂಲಕ ಹಣವನ್ನು ಡ್ರಾ ಮಾಡುವ ಮೂಲಕ ಫೆಸ್ಟ್ ಗೆ ವಿಶೇಷವಾಗಿ ಚಾಲನೆ ನೀಡಲಾಯಿತು.

ಜಾಹೀರಾತು

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶ್ರೀರಾಮ ವಿದ್ಯಾ ಕೇಂದ್ರದ ಸಂಸ್ಥಾಪಕರು, ಹಿರಿಯರು ಹಾಗೂ ಮಾರ್ಗದರ್ಶಕರಾದ ಡಾ. ಪ್ರಭಾಕರ್ ಭಟ್ ಕಲ್ಲಡ್ಕ ಮಾತನಾಡಿ, “VISTAARA 2K26” ನಿಮ್ಮ ಮುಂದಿನ ವಿದ್ಯಾಭ್ಯಾಸದಲ್ಲಿ ಸಂಶೋಧನೆಗೆ ದಾರಿದೀಪವಾಗಬೇಕು, ಅದೇ ರೀತಿ ನಿಮ್ಮಲ್ಲಿ ಹೊಸ ಹೊಸ ಚಿಂತನೆಗಳನ್ನು ಬೆಳೆಸಿಕೊಳ್ಳಲು ಸಹಾಯಕ ವಾಗುವುದು ,ವಾಣಿಜ್ಯ ಜ್ಞಾನ, ಸೃಜನಶೀಲತೆ, ವ್ಯವಹಾರಿಕ ಕೌಶಲ್ಯ ಹಾಗೂ ಹೊಸ ಚಿಂತನೆಗಳನ್ನು ಬೆಳೆಸುವ ನಿಟ್ಟಿನಲ್ಲಿ ಆಯೋಜಿಸಲಾದ VISTAARA 2k26 ಫೆಸ್ಟ್ ನಿಮ್ಮ ಜೀವನಕ್ಕೆ ದಾರಿದೀಪವಾಗಲಿ ಎಂದರು .

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಶ್ರೀರಾಮ ವಿದ್ಯಾ ಕೇಂದ್ರದ ಹಿರಿಯ ವಿದ್ಯಾರ್ಥಿ ಹಾಗೂ ಎಸ್‍ಡಿಎಂ ಕಾಲೇಜ್ ಆಫ್ ಬಿಸಿನೆಸ್ ಮ್ಯಾನೇಜ್‍ಮೆಂಟ್, ಮಂಗಳೂರು ಇದರ ಕಾಮರ್ಸ್ ಮತ್ತು ಮ್ಯಾನೇಜ್‍ಮೆಂಟ್ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಶ್ರೀ ಚೇತನ್ ರಾಜ್ ಮಾತನಾಡಿ, ಶ್ರೀರಾಮ ವಿದ್ಯಾ ಕೇಂದ್ರವು ಸಂಸ್ಕಾರಯುತ ಶಿಕ್ಷಣವನ್ನು ನೀಡುವುದರ ಜೊತೆಗೆ ವಿದ್ಯಾರ್ಥಿಗಳ ಮುಂದಿನ ಭವಿಷ್ಯವನ್ನು ರೂಪಿಸುವಲ್ಲಿ ಮಹತ್ವದ ಪಾತ್ರವನ್ನು ವಹಿಸುತ್ತಿದೆ ಎಂದು ತಮ್ಮ ವಿದ್ಯಾರ್ಥಿ ಜೀವನವನ್ನು ಸ್ಮರಿಸಿಕೊಂಡರು.
ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಶ್ರೀರಾಮ ವಿದ್ಯಾ ಕೇಂದ್ರದ ಆಡಳಿತ ಮಂಡಳಿಯ ಸದಸ್ಯರಾದ ಶ್ರೀ ನಾಗೇಶ್ ಕಲ್ಲಡ್ಕ ಮಾತನಾಡಿ, VISTAARA 2k26 ಕಾಮರ್ಸ್ ಫೆಸ್ಟ್ ವಿದ್ಯಾರ್ಥಿಗಳಿಗೆ ತಮ್ಮ ಪ್ರತಿಭೆ ಹಾಗೂ ಸಾಮರ್ಥ್ಯವನ್ನು ಪ್ರದರ್ಶಿಸಲು ಉತ್ತಮ ಅವಕಾಶ ಮತ್ತು ವೇದಿಕೆಯನ್ನು ಒದಗಿಸಿದೆ. ಇಂತಹ ಕಾರ್ಯಕ್ರಮಗಳು ವಿದ್ಯಾರ್ಥಿಗಳಲ್ಲಿ ಧೈರ್ಯ ಹಾಗೂ ಆತ್ಮವಿಶ್ವಾಸವನ್ನು ಬೆಳೆಸಲು ಸಹಕಾರಿಯಾಗುತ್ತವೆ ಎಂದರು.

ಅತಿಥಿಗಳಾದ ಶ್ರೀ ಸಂತೋಷ್ ಬೇಂಕ್ಯ ವರದಿಗಾರರು ಹಾಗೂ ಗಾಯಕರು ಮತ್ತು ಶ್ರೀರಾಮ ಪದವಿ ಪೂರ್ವ ವಿದ್ಯಾಲಯದ ಹಿರಿಯ ವಿದ್ಯಾರ್ಥಿ, ಮಾತನಾಡಿ, ಶ್ರೀರಾಮ ವಿದ್ಯಾ ಕೇಂದ್ರ ನೀಡುವ ಸಂಸ್ಕಾರಯುತ ಶಿಕ್ಷಣವು ವಿದ್ಯಾರ್ಥಿಗಳ ವಿದ್ಯಾರ್ಥಿ ಜೀವನವನ್ನು ಉತ್ತಮಗೊಳಿಸುವುದರ ಜೊತೆಗೆ ಅವರ ಮುಂದಿನ ಜೀವನಕ್ಕೆ ದಾರಿದೀಪವಾಗುತ್ತದೆ ಎಂದು ಹೇಳಿದರು. ಇದೇ ಸಂದರ್ಭದಲ್ಲಿ ಅವರು ತಮ್ಮ ವಿದ್ಯಾರ್ಥಿ ಜೀವನದ ನೆನಪುಗಳನ್ನು ಹಂಚಿಕೊಂಡರು. ಕಾಮರ್ಸ್ ಫೆಸ್ಟ್‍ನಲ್ಲಿ 10 ವಿದ್ಯಾ ಸಂಸ್ಥೆಗಳಿಂದ ಒಟ್ಟು 110 ವಿದ್ಯಾರ್ಥಿಗಳು ಹಾಗೂ 11 ಶಿಕ್ಷಕರು ಭಾಗವಹಿಸಿದ್ದರು.

ಕಾರ್ಯಕ್ರಮದಲ್ಲಿ ಶ್ರೀ ಗೋಪಾಲ್, ಮುಖ್ಯ ಗುರುಗಳು ಶ್ರೀರಾಮ ಹೈಸ್ಕೂಲ್, ಶ್ರೀ ಸುಮಂತ್ ಆಳ್ವ, ಸಹ ಮುಖ್ಯೋಪಾಧ್ಯಾಯರು, ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆ, ಹಾಗೂ ಶ್ರೀ ವಸಂತ್ ಬಲ್ಲಾಳ್, ಪ್ರಾಂಶುಪಾಲರು, ಮಾತೃಭಾರತಿಯ ಉಪಾಧ್ಯಕ್ಷರಾದ ಶ್ರೀಮತಿ ಶ್ವೇತಾ ಉಪಸ್ಥಿತರಿದ್ದರು.. ಕನ್ನಡ
ಉಪನ್ಯಾಸಕರಾದ ಶ್ರೀ ಅಶೋಕ್ ಕುಮಾರ್ ಕಾರ್ಯಕ್ರಮವನ್ನು ನಿರೂಪಿಸಿದರು.