Friday, September 11, 2026
ಸುದ್ದಿ

ನೆಹರು ಮೆಮೋರಿಯಲ್ ಕಾಲೇಜಿನಲ್ಲಿ ಹಿರಿಯ ವಿದ್ಯಾರ್ಥಿ ಸಂಘದ ವಾರ್ಷಿಕ ಮಹಾಸಭೆ :ಸುವರ್ಣ ಸಂಭ್ರಮೋತ್ಸವಕ್ಕೆ ಕಾರ್ಯ ಯೋಜನೆ- ಕಹಳೆ ನ್ಯೂಸ್

ಸುಳ್ಯ: ನೆಹರು ಮೆಮೋರಿಯಲ್ ಕಾಲೇಜಿನ ಹಿರಿಯ ವಿದ್ಯಾರ್ಥಿ ಸಂಘ(ರಿ.)ದ 2025-26ನೇ ಸಾಲಿನ ವಾರ್ಷಿಕ ಮಹಾಸಭೆಯು ಡಾ. ಕೆ. ಟಿ. ವಿಶ್ವನಾಥ್ ಅವರ ಅಧ್ಯಕ್ಷತೆಯಲ್ಲಿ ಸೆ. 9 ನಡೆಯಿತು.

ಜಾಹೀರಾತು

ಕಾಲೇಜಿನ ಹಿರಿಯ ವಿದ್ಯಾರ್ಥಿನಿ ಮತ್ತು ಉಪನ್ಯಾಸಕಿ ಸಿಂಧು ಭಾರದ್ವಾಜ್ ಅವರ ಪ್ರಾರ್ಥನೆಯೊಂದಿಗೆ ಆರಂಭಗೊಂಡ ಸಭಾಕಾರ್ಯಕ್ರಮದಲ್ಲಿ ನಿರ್ದೇಶಕರಾದ ಆನಂದ ಖಂಡಿಗರವರು ಸ್ವಾಗತಿಸಿ, ಹಿರಿಯ ವಿದ್ಯಾರ್ಥಿ ಸಂಘದ ಪ್ರಧಾನ ಕಾರ್ಯದರ್ಶಿ ಮಧುರಾ ಎಂ. ಆರ್. ಅವರು ಸಂಘದ ವಾರ್ಷಿಕ ವರದಿಯನ್ನು ಮಂಡಿಸಿದರು. ಅಧ್ಯಕ್ಷರು ಸಂಘದ ಲೆಕ್ಕಪತ್ರದ ವರದಿಯನ್ನು ಸಭೆಯ ಮುಂದಿಟ್ಟು ಅನುಮೋದನೆ ಪಡೆಯಲಾಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಸಭೆಯಲ್ಲಿ ಭಾಗವಹಿಸಿದ್ದ ಹಿರಿಯ ವಿದ್ಯಾರ್ಥಿಗಳು ಕಾಲೇಜಿನ ಐವತ್ತನೇ ವರ್ಷದ ಸಂಭ್ರಮವಾದ ಸುವರ್ಣ ಮಹೋತ್ಸವದ ಆಚರಣೆಯ ಕುರಿತು ಚರ್ಚಿಸಿದರು. ಕಾಲೇಜಿನ ಆಡಳಿತಾಧಿಕಾರಿ ಮತ್ತು ಹಿರಿಯ ವಿದ್ಯಾರ್ಥಿ ಚಂದ್ರಶೇಖರ ಪೇರಾಲುರವರು ಕಾಲೇಜಿನ ಮುಂದಿನ ಯೋಜನೆಗಳು ಹಾಗೂ ಕಾರ್ಯಕ್ರಮಗಳ ರೂಪುರೇಷೆಗಳ ಕುರಿತು ಮಾಹಿತಿ ನೀಡಿದರು. ಸುವರ್ಣ ಮಹೋತ್ಸವದ ವಿವಿಧ ಕಾರ್ಯಕ್ರಮಗಳನ್ನು ಯಾವ ರೀತಿಯಲ್ಲಿ ಆಯೋಜಿಸಬೇಕು, ಕಾರ್ಯಯೋಜನೆಗಳನ್ನು ಹೇಗೆ ರೂಪಿಸಬೇಕು ಹಾಗೂ ಹಿರಿಯ ವಿದ್ಯಾರ್ಥಿ ಸಂಘದ ವತಿಯಿಂದ ಕೈಗೊಳ್ಳಬಹುದಾದ ವಿವಿಧ ಚಟುವಟಿಕೆಗಳ ಕುರಿತು ಸದಸ್ಯರು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು. ಚರ್ಚೆಯ ಬಳಿಕ ಹಲವು ಪ್ರಮುಖ ನಿರ್ಣಯಗಳನ್ನು ಕೈಗೊಳ್ಳಲಾಯಿತು.

ಈ ಸಂದರ್ಭ ಕಾಲೇಜಿನ ಪ್ರಾಂಶುಪಾಲರಾದ ಡಾ. ರುದ್ರಕುಮಾರ್ ಎಂ.ಎಂ ಮಾತುಗಳನ್ನಾಡಿ, ಹಿರಿಯ ವಿದ್ಯಾರ್ಥಿ ಸಂಘದ ಮಹತ್ವದ ಪಾತ್ರಗಳು ಹಾಗೂ ಕಾಲೇಜಿನ ಅಭಿವೃದ್ಧಿಯಲ್ಲಿನ ನಿರಂತರ ಕೊಡುಗೆಗಳನ್ನು ಶ್ಲಾಘಿಸಿದರು.

ಅಧ್ಯಕ್ಷರಾದ ಡಾ. ಕೆ. ಟಿ. ವಿಶ್ವನಾಥ್ ಅವರು ಮಾತನಾಡಿ, ಹಿರಿಯ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳು ಮತ್ತು ಎಲ್ಲಾ ಸದಸ್ಯರು ಪ್ರಸ್ತುತ ಕಾಲೇಜಿನ ಶೈಕ್ಷಣಿಕ, ಸಾಂಸ್ಕೃತಿಕ ಹಾಗೂ ಅಭಿವೃದ್ಧಿ ಚಟುವಟಿಕೆಗಳಲ್ಲಿ ಇನ್ನಷ್ಟು ಸಕ್ರಿಯವಾಗಿ ತೊಡಗಿಸಿಕೊಂಡು, ಕಾಲೇಜಿನ ಸುವರ್ಣ ಮಹೋತ್ಸವವನ್ನು ಯಶಸ್ವಿಗೊಳಿಸುವಲ್ಲಿ ಸಹಕರಿಸುವಂತೆ ಕರೆ ನೀಡಿದರು. ಸುವರ್ಣ ಮಹೋತ್ಸವದ ಕಾರ್ಯಕ್ರಮಗಳಿಗಾಗಿ ಕಾರ್ಯಯೋಜನಾ ಸಮಿತಿಯನ್ನು ರಚಿಸಲಾಯಿತು. ಈ ಸಮಿತಿ ಮುಖೇನ ಕಾಲೇಜಿನ ಪ್ರತಿಯೊಬ್ಬ ಹಿರಿಯ ವಿದ್ಯಾರ್ಥಿಗಳನ್ನು ತಲುಪಿ ಸುವರ್ಣ ಮಹೋತ್ಸವದ ಕ್ಷಣಗಳಿಗೆ ಎಲ್ಲರೂ ಸಾಕ್ಷಿಗಳಾಗುವಂತೆ ಮಾಡಲು ಯೋಜನೆಗಳನ್ನು ರೂಪಿಸಲು ನಿರ್ಣಯಿಸಲಾಯಿತು.

ವೇದಿಕೆಯಲ್ಲಿ ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ ರಿ. ಸುಳ್ಯದ ನಿರ್ದೇಶಕಿ ಮೀನಾಕ್ಷಿ ಹೇಮಾನಾಥ್, ಹಿರಿಯ ವಿದ್ಯಾರ್ಥಿ ಸಂಘದ ನಿಕಟ ಪೂರ್ವಧ್ಯಕ್ಷ ಚಂದ್ರ ಕೋಲ್ಚಾರ್, ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಮಿಥಾಲಿ ಪಿ ರೈ, ಕಾಲೇಜಿನ ಅಧ್ಯಾಪಕ ಪ್ರತಿನಿಧಿ ಕುಲದೀಪ್ ಪೆಲ್ತಡ್ಕ ಉಪಸ್ಥಿತರಿದ್ದರು. ಹಿರಿಯ ವಿದ್ಯಾರ್ಥಿ ಸಂಘದ ಪ್ರಧಾನ ಕಾರ್ಯದರ್ಶಿ ಮಧುರಾ ಎಂ. ಆರ್. ರವರು ಎಲ್ಲರಿಗೂ ಧನ್ಯವಾದಗಳನ್ನು ಸಲ್ಲಿಸಿದರು. ಡಾ. ಅನುರಾಧ ಕುರುಂಜಿ ಕಾರ್ಯಕ್ರಮ ನಿರೂಪಿಸಿದರು. ಕಾಲೇಜಿನ ಎಲ್ಲಾ ಬೋಧಕ ಬೋದಕೇತರ ವೃಂದದವರು ಸಹಕರಿಸಿ ಕಾರ್ಯಕ್ರಮವು ಯಶಸ್ವಿಯಾಗಿ ಸಮಾಪನಗೊಂಡಿತು.