Saturday, September 12, 2026
ಸುದ್ದಿ

ಪಟ್ಟೆ ಶ್ರೀ ಕೃಷ್ಣ ವಿದ್ಯಾ ಸಂಸ್ಥೆಗಳ ನಾಯಕತ್ವದಲ್ಲಿ ಕರ್ನಾಟಕ ರಾಜ್ಯ ವಾಲಿಬಾಲ್ ತಂಡ ರಾಷ್ಟ್ರ ಮಟ್ಟದಲ್ಲಿ ದ್ವಿತೀಯ ಸ್ಥಾನ – ಕಹಳೆ ನ್ಯೂಸ್

ಸೆ. 6ರಿಂದ 10ರ ತನಕ ಮಹಾರಾಷ್ಟ್ರದ ನಾಸಿಕ್ ನಲ್ಲಿ ನಡೆದ ರಾಷ್ಟ್ರಮಟ್ಟದ 3A ವಾಲಿಬಾಲ್ ಅಸೋಸಿಯೇಷನ್ ಆಫ್ ಕರ್ನಾಟಕ ಜೂನಿಯರ್ ವಾಲಿಬಾಲ್ ಪಂದ್ಯಾಟದಲ್ಲಿ ಕರ್ನಾಟಕ ರಾಜ್ಯ ತಂಡ ದ್ವಿತೀಯ ಸ್ಥಾನ ಗಳಿಸಿರುತ್ತದೆ.

ಜಾಹೀರಾತು

ಈ ತಂಡದ ನಾಯಕತ್ವ ವಹಿಸಿದವರು ಪಟ್ಟೆ ಶ್ರೀ ಕೃಷ್ಣ ವಿದ್ಯಾ ಸಂಸ್ಥೆಯ ಕ್ರೀಡಾಪಟು 9ನೇ ತರಗತಿಯ ಪ್ರತ್ವಿಶ್ ಕನ್ನಾಯ ಹಾಗೂ ಈ ತಂಡದಲ್ಲಿ ಇನ್ನೋರ್ವ ಆಟಗಾರನಾಗಿ ಒಂಬತ್ತನೇ ತರಗತಿ ನಿಶ್ಮಿತ್ ಭಾಗವಹಿಸಿರುತ್ತಾರೆ. ಈ ತಂಡಕ್ಕೆ ಪಟ್ಟೆಯ ಶ್ರೀಕೃಷ್ಣ ವಿದ್ಯಾ ಸಂಸ್ಥೆಯ ಕ್ರೀಡಾಂಗಣದಲ್ಲಿ ಒಂದು ವಾರಗಳ ಕಾಲ ತರಬೇತಿಯನ್ನು ಸಂಸ್ಥೆಯ ಅಧ್ಯಕ್ಷರಾದ ಶ್ರೀಯುತ ಗೋಪಾಲಕೃಷ್ಣ ಭಟ್ ಅವರ ಮಾರ್ಗದರ್ಶನದಲ್ಲಿ ನೀಡಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಈ ತಂಡಕ್ಕೆ ಶ್ರೀಕೃಷ್ಣ ವಿದ್ಯಾ ಸಂಸ್ಥೆಗಳ ದೈಹಿಕ ಶಿಕ್ಷಣ ಶಿಕ್ಷಕರಾದ ಮೋನಪ್ಪ ಪಟ್ಟೆ, ಶ್ರೀ ಗೋಪಿನಾಥ್, ಆಮಮ್ಸ್ ಮೂಡಡ್ಕದ ದೈಹಿಕ ಶಿಕ್ಷಣ ಶಿಕ್ಷಕರಾದ ರಫೀಕ್ ಆತೂರು ತರಬೇತಿಯನ್ನು ನೀಡಿರುತ್ತಾರೆ.