ಸೆ.27ರಂದು ವಿಶ್ವ ಹಿಂದೂ ಪರಿಷದ್ ಬಜರಂಗದಳ ಪುತ್ತೂರು ಗ್ರಾಮಾಂತರ ಪ್ರಖಂಡ ದುರ್ಗಾ ಶಾಖೆ ಕೆಯ್ಯೂರು ಇದರ ಆಶ್ರಯದಲ್ಲಿ ವಿಶ್ವ ಹಿಂದೂ ಪರಿಷದ್ ಸ್ಥಾಪನಾ ದಿನಾಚರಣೆ ಹಾಗೂ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಮೊಸರುಕುಡಿಕೆ ಉತ್ಸವ – ಕಹಳೆ ನ್ಯೂಸ್

ಪುತ್ತೂರು : ವಿಶ್ವ ಹಿಂದೂ ಪರಿಷದ್ ಬಜರಂಗದಳ ಪುತ್ತೂರು ಗ್ರಾಮಾಂತರ ಪ್ರಖಂಡ ದುರ್ಗಾ ಶಾಖೆ ಕೆಯ್ಯೂರು ಇದರ ಆಶ್ರಯದಲ್ಲಿ ಸೆ.27ರಂದು ಶ್ರೀದೇವಿ ಮೈದಾನ ಕೆಯ್ಯೂರಿನಲ್ಲಿ ವಿಶ್ವ ಹಿಂದೂ ಪರಿಷದ್ ಸ್ಥಾಪನಾ ದಿನಾಚರಣೆ ಹಾಗೂ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಮೊಸರುಕುಡಿಕೆ ಉತ್ಸವ ನಡೆಯಲಿದೆ.
ಆ ಪ್ರಯುಕ್ತ ಶ್ರೀದೇವಿ ಮೈದಾನ ಕೆಯ್ಯೂರಿನಲ್ಲಿ ಸಾರ್ವಜನಿಕರಿಗೆ ವಿವಿಧ ಆಟೋಟ ಸ್ಪರ್ಧೆಗಳನ್ನು ಆಯೋಜಿಸಲಾಗಿದ್ದು, ಹಿಂದೂ ಬಾಂಧವರ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸಿ, ಕಾರ್ಯಕ್ರಮ ಯಶಸ್ವಿಗೊಳಿಸಬೇಕೆಂದು ವಿಶ್ವ ಹಿಂದೂ ಪರಿಷದ್ ಬಜರಂಗದಳ ಕೆಯ್ಯೂರು ಘಟಕದ ಅಧ್ಯಕ್ಷರು ಮತ್ತು ಸರ್ವ ಸದಸ್ಯರು ವಿನಂತಿಸಿಕೊಂಡಿದ್ದಾರೆ.
ಬೆಳಿಗ್ಗೆ ಗಂಟೆ 8.00 ರಿಂದ ಭಜನಾ ಕಾರ್ಯಕ್ರಮ, ಶ್ರೀ ದುರ್ಗಾ ಭಜನಾ ಮಂಡಳಿ ಕೆಯ್ಯೂರು ಹಾಗೂ ವಿವಿಧ ತಂಡಗಳಿಂದ – ಕುಣಿತ ಭಜನಾ ಕಾರ್ಯಕ್ರಮ ಬಳಿಕ ಬೆಳಿಗ್ಗೆ ಗಂಟೆ 10.00 ರಿಂದ ಕೃಷ್ಣ ವೇಷ ಸ್ಪರ್ಧೆ, ಮಧ್ಯಾಹ್ನ ಗಂಟೆ 2-00ಕ್ಕೆ ಶಾಲಾ ಮಕ್ಕಳಿಂದ ಸಾಂಸ್ಕøತಿಕ ಕಾರ್ಯಕ್ರಮ (ಕಾರ್ಯಕ್ರಮ ಕೊಡುವ ಆಸಕ್ತರು ಹೆಸರು ನೊಂದಾಯಿಸಬಹುದು) ನಡೆಯಲಿದೆ.
ಬೆಳಗ್ಗೆ 10.00ಕ್ಕೆ ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿ ಕು। ಭಾಗೀರಥಿ ಮುರುಳ್ಯ ಅವರ ಸಭಾಕ್ಷತೆಯಲ್ಲಿ ಸಭಾಕಾರ್ಯಕ್ರಮ ನಡೆಯಲಿದ್ದು, Sಅಆಅಅ ಬ್ಯಾಂಕ್ ಮಂಗಳೂರು ಇದರ ನಿರ್ದೇಶಕರು ಮತ್ತು ಮಂಗಳೂರು ಏಒಈ ಇದರ ಅಧ್ಯಕ್ಷ ಎಸ್. ಬಿ. ಜಯರಾಮ ರೈ ಬಳಜ್ಜ ಇವರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಇನ್ನು ಕಾರ್ಯಕ್ರಮದಲ್ಲಿ ಅನೇಕ ಗಣ್ಯರು ಭಾಗವಹಿಸಲಿದ್ದಾರೆ.
ಸಂಜೆ ಗಂಟೆ 6-00ಕ್ಕೆ ವಿ.ಹಿಂ.ಪ ಗ್ರಾಮಾಂತರ ಪ್ರಖಂಡ ಕಾರ್ಯದರ್ಶಿ ಸಹದೇವ್ ಮುಕ್ರಂಪಾಡಿ ಅವರ ಸಭಾಧ್ಯಕ್ಷತೆ ಸಮಾರೋಪ ಸಮಾರಂಭ ನಡೆಯಲಿದ್ದು, ವಿಶ್ವ ಹಿಂದು ಪರಿಷತ್ ಮಂಗಳೂರು ವಿಭಾಗ ಇದರ ವಿಭಾಗ ಕಾರ್ಯದರ್ಶಿ ಶಿವಾನಂದ ಮೆಂಡನ್ , ಮಂಗಳೂರು ಬಜರಂಗದಳ ವಿಭಾಗ ಇದರ ಸಹ ಸಂಯೋಜಕ ನವೀನ್ ಮೂಡುಶೆಡ್ಡೆ, ಮಂಗಳೂರು ವಿಧಾನಸಭಾ ಕ್ಷೇತ್ರದ ಸಂಸದ ಬ್ರಿಜೇಶ್ ಚೌಟ, ವಿಜಯ ಸಾಮ್ರಾಟ್ ಪುತ್ತೂರು ಇದರ ಸಂಸ್ಥಾಪಕ ಸಹಜ್ ರೈ ಬಳಜ್ಜ , ವಿಧಾನ ಪರಿಷತ್ ಶಾಸಕ ಕಿಶೋರ್ ಕುಮಾರ್ ಬೊಟ್ಯಾಡಿ, ಬಜರಂಗದಳ ಜಿಲ್ಲಾ ಸಂಚಾಲಕರು ಪ್ರೀತಮ್ ಕಾಟಿಪಳ್ಳ ಮಂಗಳೂರು, ಸೇರಿದಂತೆ ಅನೇಕ ಗಣ್ಯರು ಭಾಗವಹಿಸಲಿದ್ದಾರೆ. ಬಳಿಕ ಸಾಧಕರಿಗೆ ಸನ್ಮಾನ ನಡೆಯಲಿದೆ.











