Sunday, September 13, 2026
ಸುದ್ದಿ

ಕಾರ್ಕಳ ಶಾಸಕರ ಬಗ್ಗೆ ಪ್ರಚೋದನಕಾರಿ ವಿಡಿಯೋ ಪೋಸ್ಟ್: ಆರೋಪಿ ಪೊಲೀಸ್ ವಶಕ್ಕೆ- ಕಹಳೆನ್ಯೂಸ್

ಕಾರ್ಕಳ: ಕಾರ್ಕಳ ಶಾಸಕ ಸುನೀಲ್ ಕುಮಾರ್ ಅವರ ಕುರಿತ ಪ್ರಚೋದನಕಾರಿ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿ ಅವಾಚ್ಯ ಶಬ್ದಗಳಿಂದ ನಿಂದಿಸಿರುವ ಪ್ರಕರಣಕ್ಕೆ ಸಂಬಂಧಿಸಿ ಓರ್ವ ಆರೋಪಿಯನ್ನು ಕಾರ್ಕಳ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಜಾಹೀರಾತು

ಆರೋಪಿ ಪ್ರಸಾದ್ ಶೆಟ್ಟಿ ಸಾರ್ವಜನಿಕರಿಗೆ ಪ್ರಚೋದನೆ ನಿಡುವ ಉದ್ದೆಶದಿಂದ ಶಾಸಕ ಸುನೀಲ್ ಕುಮಾರ್ ಅವರನ್ನು ಕೊಲೆ ಮಾಡಬೇಕು ಎಂಬ ರೀತಿಯಲ್ಲಿ ಪ್ರಚೋದನಾಕಾರಿ ವಿಡಿಯೋ ಸೃಷ್ಟಿಸಿ ಅವಾಚ್ಯ ಶಬ್ದದಿಂದ ಬೈದಿರುವುದಾಗಿ ವಿಘೇಶ್ ಪ್ರಸಾದ್ ರಾವ್ ದೂರು ನೀಡಿದ್ದರು. ಅದರಂತೆ ಪ್ರಕರಣ ದಾಖಲಿಸಿಕೊಂಡಿದ್ದ ಕಾರ್ಕಳ ಗ್ರಾಮಾಂತರ ಠಾಣಾ ಪೊಲೀಸರು ಆರೋಪಿ ಪ್ರಸಾದ್ ಶೆಟ್ಟಿಯನ್ನು ಹೆಚ್ಚಿನ ವಿಚಾರಣೆಗೆ ವಶಕ್ಕೆ ಪಡೆದಿದ್ದಾರೆ. ಮುಂದಿನ ಕಾನೂನು ಕ್ರಮಕ್ಕಾಗಿ ಆರೋಪಿಯನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು