Monday, September 14, 2026
ಸುದ್ದಿ

ಶ್ರೀಕೃಷ್ಣ ವಿದ್ಯಾ ಸಂಸ್ಥೆಗಳಲ್ಲಿ ಅಭಿನಂದನಾ ಕಾರ್ಯಕ್ರಮ ಕಾರ್ಯಕ್ರಮ- ಕಹಳೆನ್ಯೂಸ್

ಶ್ರೀ ಕೃಷ್ಣ ಲೀಲೆ-2026, ಸಾಂದೀಪನಿ ಗುರು ಪ್ರಶಸ್ತಿ ಪ್ರದಾನ ಸಮಾರಂಭವು ದಿನಾಂಕ 05/09/2026ನೇ ಶನಿವಾರ ಶ್ರೀ ಕೃಷ್ಣ ವಿದ್ಯಾ ಸಂಸ್ಥೆಗಳಲ್ಲಿ ನಡೆದಿದ್ದು, ಕಾರ್ಯಕ್ರಮದ ಯಶ್ವಸಿಗೆ ಸಹಕರಿಸಿದ ವಿವಿಧ ಸಮಿತಿಯ ಸಂಚಾಲಕರಿಗೆ ಹಾಗೂ ಕಾರ್ಯಕರ್ತರಿಗೆ ಅಭಿನಂದನಾ ಕಾರ್ಯಕ್ರಮವು ಪಟ್ಟೆ ಶ್ರೀಕೃಷ್ಣ ವಿದ್ಯಾ ಸಂಸ್ಥೆಗಳಲ್ಲಿ ಸಂಸ್ಥೆಗಳ ಅಧ್ಯಕ್ಷರಾದ ಶ್ರೀಯುತ ಗೋಪಾಲಕೃಷ್ಣಭಟ್ ಇವರ ಅಧ್ಯಕ್ಷತೆಯಲ್ಲಿ ಜರಗಿತು.

ಜಾಹೀರಾತು

ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಶ್ರೀಕೃಷ್ಣ ವಿದ್ಯಾಸಂಸ್ಥೆಗಳ ನಿರ್ದೇಶಕರಾದ ಶ್ರೀ ಗಣರಾಜ ಕುಂಬ್ಳೆ, ಸಂಚಾಲಕರಾದ ಶ್ರೀ ವಿಘ್ನೇಶ್ ಹಿರಣ್ಯ, ಸಂಸ್ಥೆಯ ಮುಖ್ಯಗುರುಗಳು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಸಂಸ್ಥೆಯ ಅಧ್ಯಕ್ಷರು ಶ್ರೀ ಕೃಷ್ಣ ಲೀಲಾ ಕಾರ್ಯಕ್ರಮದಲ್ಲಿ ಸಹಕರಿಸಿದ ಎಲ್ಲರಿಗೂ ಅಭಿನಂದನಾ ಮಾತುಗಳಾನ್ನಾಡಿ ಶುಭ ಹಾರೈಸಿ, ಪ್ರಾತಿನಿಧಿಕವಾಗಿ ವಿವಿಧ ಉಪ ಸಮಿತಿಯ ಸಂಚಾಲಕರಿಗೆ ನೆನಪಿನ ಕಾಣಿಕೆಯನ್ನು ನೀಡಿ ಗೌರವಿಸಿದರು. ಭಜನಾ ಸಮಿತಿಯ ಸಂಚಾಲಕರಾದ ನಿವೃತ್ತ ಮುಖ್ಯಗುರು ಶ್ರೀಮತಿ ಶಂಕರಿ , ಮೆರವಣಿಗೆ ಸಮಿತಿಯ ಸಂಚಾಲಕರಾದ ಶ್ರೀಯುತ ಸುಬ್ಬಪ್ಪ ಪಾಟಾಳಿ ಇವರು ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದರು.

ಪ್ರಾಥಮಿಕ ಶಾಲಾ ಮುಖ್ಯಗುರುಗಳಾದ ಶ್ರೀ ರಾಜಗೋಪಾಲ್ ಎನ್, ಸ್ವಾಗತಿಸಿ,ಶ್ರೀಮತಿ ಭವಿತಾ ದನ್ಯವಾದಗಳನ್ನಿತರು. ಪ್ರೌಢಶಾಲಾ ಮುಖ್ಯ ಗುರುಗಳಾದ ಶ್ರೀಮತಿ ಸುಮನಾ ಬಿ, ಕಾರ್ಯಕ್ರಮ ನಿರೂಪಿಸಿದರು. ಸಂಸ್ಥೆಯ ಎಲ್ಲಾ ಶಿಕ್ಷಕರು ಉಪಸ್ಥಿತರಿದ್ದರು.