Tuesday, September 15, 2026
ಸುದ್ದಿ

ಬೈಕ್‌ಗೆ KSRTC ಬಸ್‌ ಡಿಕ್ಕಿ : ಮೂವರು ಸ್ಥಳದಲ್ಲೇ ಸಾವು – ಕಹಳೆ ನ್ಯೂಸ್

ಬೆಳಗಾವಿ: ಬೈಕಿಗೆ KSRTC ಬಸ್ ಡಿಕ್ಕಿಯಾಗಿ ಸ್ಥಳದಲ್ಲೇ ಮೂವರು ಯುವಕರು ಸಾವನ್ನಪ್ಪಿದ ಘಟನೆ ಬೆಳಗಾವಿ ಜಿಲ್ಲೆಯ ಸವದತ್ತಿ ಪಟ್ಟಣದ ಹೊರವಲಯದಲ್ಲಿ ಮಂಗಳವಾರ ತಡರಾತ್ರಿ ನಡೆದಿದೆ.
ವಿನೋದ ಹೊಗೆನ್ನವರ (22) ಆಕಾಶ್ ಜಾಧವ (20) ರವಿ ಕುರುಬರ (22) ಮೃತ ದುರ್ದೈವಿಗಳು. KSRTC ಬಸ್ ಸವದತ್ತಿಯಿಂದ ಧಾರವಾಡದ ಕಡೆಗೆ ಹೋಗುತ್ತಿತ್ತು. ಈ ವೇಳೆ ಎದರಿನಿಂದ ಬೈಕ್‌ಗೆ ಬಸ್ ಗುದ್ದಿದೆ. ಪರಿಣಾಮ ಬೈಕ್‌ನಲ್ಲಿದ್ದ ಮೂವರು ಸವಾರರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಮೃತರೆಲ್ಲರೂ ಸವದತ್ತಿ ಪಟ್ಟಣದ ನಿವಾಸಿಗಳು ಎಂದು ತಿಳಿದು ಬಂದಿದೆ.

ಜಾಹೀರಾತು

ಘಟನಾ ಸ್ಥಳಕ್ಕೆ ಸವದತ್ತಿ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಸವದತ್ತಿ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು