Recent Posts

Thursday, September 17, 2026
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶಾರದಾ ಪ್ರೌಢಶಾಲೆ ಪಾಣೆ ಮಂಗಳೂರಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ – ಕಹಳೆ ನ್ಯೂಸ್

ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ( ರಿ.) ಬಂಟ್ವಾಳ ತಾಲೂಕು ಪಾಣೆಮಂಗಳೂರು ವಲಯ ಮತ್ತು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಬಂಟ್ವಾಳ ತಾಲೂಕು ಇದರ ಸಹಭಾಗಿತ್ವದಲ್ಲಿ ಶ್ರೀ ಶಾರದಾ ಪ್ರೌಢಶಾಲೆ ಪಾಣೆ ಮಂಗಳೂರಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ಸೆಪ್ಟೆಂಬರ್ 16 ಬುಧವಾರ ಜರಗಿತು.
ಕಾರ್ಯಕ್ರಮವನ್ನು ಶಾಲಾಬಿವೃದ್ಧಿ ಸಮಿತಿಯ ಅಧ್ಯಕ್ಷರಾದ ನರೇಂದ್ರನಾಥ ಕುಡುವ ರವರು ಉದ್ಘಾಟಿಸಿ ಶುಭ ಹಾರೈಸಿದರು.

ಜಾಹೀರಾತು

ಸಂಪನ್ಮೂಲ ವ್ಯಕ್ತಿಯಾಗಿ ನಿವೃತ್ತ ಆರೋಗ್ಯ ಮೇಲ್ವಿಚಾರಕ ಜಯರಾಮ್ ಪೂಜಾರಿ ಮಕ್ಕಳಿಗೆ ಆರೋಗ್ಯವಂತ ಜೀವನವನ್ನು ನಡೆಸಲು ದುಶ್ಚಟಗಳಿಂದ ದೂರವಿದ್ದಲ್ಲಿ ಮಾತ್ರ ಸಾಧ್ಯ, ಒಳ್ಳೆಯ ಆರೋಗ್ಯ ಒಳ್ಳೆಯ ಅಭ್ಯಾಸಗಳನ್ನು ರೂಢಿಸಿಕೊಂಡಲ್ಲಿ ಕೌಟುಂಬಿಕ ಸಾಮಾಜಿಕ ಸಮಸ್ಯೆಗಳಿಂದ ದೂರವಿರಬಹುದು ಎಂದು ಮಕ್ಕಳಿಗೆ ಪ್ರೌಢಾ ವ್ಯವಸ್ಥೆಯಲ್ಲಿ ಸಮಾಜದಲ್ಲಿ ಎದುರಿಸುವಂತಹ ಸಮಸ್ಯೆಗಳನ್ನು ಸವಾಲುಗಳನ್ನು ಮೆಟ್ಟಿ ನಿಂತಲ್ಲಿ ಮಾತ್ರ ಉತ್ತಮ ವ್ಯಕ್ತಿಯಾಗಿ ಕಾಣಿಸಿಕೊಳ್ಳಲು ಸಾಧ್ಯ ಎಂದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ವೇದಿಕೆಯಲ್ಲಿ ಶಾಲಾ ಮುಖ್ಯ ಶಿಕ್ಷಕ ಶಿವಪ್ಪ ನಾಯ್ಕ್ ಎಸ್, ವಲಯ ಮೇಲ್ವಿಚಾರಕಿ ಶಿವಲಕ್ಷ್ಮಿ ಒಕ್ಕೂಟದ ನಿಕಟಪೂರ್ವಕ ಅಧ್ಯಕ್ಷೆ ವಸಂತಿ ಗಂಗಾಧರ್, ಒಕ್ಕೂಟ ಸೇವಾ ಪ್ರತಿನಿಧಿ ಸುಲೋಚನ ಉಪಸ್ಥಿತರಿದ್ದರು.

ಶಾಲಾ ಶಿಕ್ಷಕರು, ಶಾಲಾ ಮಕ್ಕಳು ಕಾರ್ಯಕ್ರಮದಲ್ಲಿ ಭಾಗವಹಿಸಿದರು.