Sunday, September 20, 2026
ಸುದ್ದಿ

ಬೈಕ್‌ನಲ್ಲಿ ತೆರಳುತ್ತಿದ್ದ ಕಾರ್ಮಿಕರ ಮೇಲೆ ಒಂಟಿ ಸಲಗ ದಾಳಿ : ಇಬ್ಬರು ಗಂಭೀರ – ಕಹಳೆ ನ್ಯೂಸ್

ಮಡಿಕೇರಿ: ಕೊಡಗಿನಲ್ಲಿ ಕಾಡಾನೆಗಳ ಹಾವಳಿ ಮುಂದುವರಿದಿದ್ದು, ಕಾಡಾನೆ ದಾಳಿಗೆ  ಇಬ್ಬರು ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಕುಶಾಲನಗರ ತಾಲ್ಲೂಕಿನ ಅತ್ತಿಮಂಗಲ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಕೂಲಿ ಕೆಲಸಕ್ಕೆ ಬೈಕ್‌ನಲ್ಲಿ ತೆರಳುತ್ತಿದ್ದ ಇಬ್ಬರು ಕಾರ್ಮಿಕರ ಮೇಲೆ ರಸ್ತೆಗೇ ಏಕಾಏಕಿ ಬಂದ ಒಂಟಿ ಸಲಗ ದಾಳಿ ನಡೆಸಿದೆ. ಗಾಯಗೊಂಡವರನ್ನ ಸುಬ್ರಹ್ಮಣಿ (60) ಹಾಗೂ ಉಮೇಶ್ (53) ಎಂದು ಗುರುತಿಸಲಾಗಿದೆ. ರಸ್ತೆ ಬದಿಯಲ್ಲಿ ದಟ್ಟವಾಗಿ ಬೆಳೆದಿದ್ದ ಗಿಡಗಂಟಿ ಮತ್ತು ಪೊದೆಗಳ ನಡುವೆ ಕಾಡಾನೆ ಅಡಗಿದ್ದರಿಂದ, ವಾಹನ ಸವಾರರಿಗೆ ಆನೆ ಕಾಣಿಸಿರಲಿಲ್ಲ ಎಂದು ತಿಳಿದುಬಂದಿದೆ.

ಜಾಹೀರಾತು