
ಶ್ರೀ ರಾಮ ಪದವಿ ಪೂರ್ವ ವಿದ್ಯಾಲಯದಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳ 2026-27ನೇ ಸಾಲಿನ ಪೋಷಕರ ಸಭೆ ನಡೆಯಿತು.
ಕಾರ್ಯಕ್ರಮದಲ್ಲಿ ಶ್ರೀರಾಮ ವಿದ್ಯಾಕೇಂದ್ರದ ಸAಸ್ಥಾಪಕರಾದ ಡಾ. ಪ್ರಭಾಕರ್ ಭಟ್ ಕಲ್ಲಡ್ಕ ಮಾತನಾಡಿ ವಿದ್ಯಾರ್ಥಿಗಳಿಗೆ ಶಿಕ್ಷಣದ ಜೊತೆಗೆ ಉತ್ತಮ ಸಂಸ್ಕಾರವನ್ನು
ನೀಡುವಲ್ಲಿ ಹಾಗೂ ಅವರ ಶೈಕ್ಷಣಿಕ ಪ್ರಗತಿಗೆ ಪೂರಕ ವಾತಾವರಣ ಕಲ್ಪಿಸುವಲ್ಲಿ ಶಿಕ್ಷಕರಷ್ಟೇ ಪೋಷಕರ ಪಾತ್ರವೂ ಮಹತ್ವದ್ದಾಗಿದೆ ಎಂದರು. ವಿದ್ಯಾರ್ಥಿಗಳ ಭವಿಷ್ಯದ ನಿರ್ಮಾಣದಲ್ಲಿ
ಪೋಷಕರು ವಹಿಸಬೇಕಾದ ಜವಾಬ್ದಾರಿಗಳ ಕುರಿತು ಮಾರ್ಗದರ್ಶನ ನೀಡಿದರು. ಶ್ರೀ ರಾಮ ಪದವಿ ಪೂರ್ವ ವಿದ್ಯಾಲಯದ ಪ್ರಾಂಶುಪಾಲರಾದ ಶ್ರೀ ವಸಂತ್ ಬಲ್ಲಾಳ್
ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾರ್ಯಕ್ರಮದಲ್ಲಿ ವಿದ್ಯಾಕೇಂದ್ರದ ಅಧ್ಯಕ್ಷರಾದ ಶ್ರೀ ನಾರಾಯಣ ಸೋಮಯಾಜಿ , ಸಂಚಾಲಕರಾದ ಶ್ರೀ ವಸಂತ ಮಾಧವ , ಸದಸ್ಯರಾದ ಶ್ರೀ
ನಾಗೇಶ್ ಕಲ್ಲಡ್ಕ , ಕಾರ್ಯನಿರ್ವಹಣಾಧಿಕಾರಿಯಾದ ಶ್ರೀ ಕೃಷ್ಣಪ್ರಸಾದ್ ಕಾಯರಕಟ್ಟೆ ಉಪಸ್ಥಿತರಿದ್ದರು. ಸಭೆಯಲ್ಲಿ ಪೋಷಕರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು. ಕಾರ್ಯಕ್ರಮವನ್ನು ಉಪನ್ಯಾಸಕರಾದ ಶ್ರೀಮತಿ ಚೈತನ್ಯ ನಿರ್ವಹಿಸಿದರು.










