Thursday, September 24, 2026
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ವಿವೇಕಾನಂದ ಕಾಲೇಜಿನಲ್ಲಿ ಎನ್‌ಸಿಸಿ ಘಟಕದಿಂದ  ಅಭಿನಂದನಾ ಕಾರ್ಯಕ್ರಮ – ಕಹಳೆ ನ್ಯೂಸ್

ಪುತ್ತೂರು : ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ (ಸ್ವಾಯತ್ತ)  ಮಹಾವಿದ್ಯಾಲಯ, ಇಲ್ಲಿನ ಎನ್‌ಸಿಸಿ ಘಟಕಗಳ ಸಂಯುಕ್ತ ಆಶ್ರಯದಲ್ಲಿ  ಅಭಿನಂದನಾ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ 19 ಕರ್ನಾಟಕ  ಬೆಟಾಲಿಯನ್, ಮಡಿಕೇರಿಯ ಕಮಾಂಡಿಂಗ್  ಆಫೀಸರ್ ಕರ್ನಲ್ ಸಂಜೀವ್ ಕುಮಾರ್  ಮಾತನಾಡಿ ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಸ್ಪಷ್ಟವಾದ ಗುರಿಯನ್ನು ಹೊಂದಿ,  ಅದನ್ನು ಸಾಧಿಸುವ ನಿಟ್ಟಿನಲ್ಲಿ ನಿರಂತರ ಪರಿಶ್ರಮ ಹಾಗೂ ಆತ್ಮವಿಶ್ವಾಸದಿಂದ  ಮುನ್ನಡೆಯಬೇಕು, ಜೀವನದಲ್ಲಿ ಎದುರಾಗುವ ಸವಾಲುಗಳಿಗೆ ಹೆದರದೆ,  ಕನಸುಗಳನ್ನು ನನಸಾಗಿಸುವ ನಿಟ್ಟಿನಲ್ಲಿ ಕಠಿಣ ಪರಿಶ್ರಮ ಮಾಡಬೇಕು.

ಜಾಹೀರಾತು

ಯಾವುದೇ ಕಾರ್ಯವನ್ನು ಆರಂಭಿಸಿದ ಬಳಿಕ ಮಧ್ಯದಲ್ಲೇ ಕೈಬಿಡದೆ, ನಿರಂತರ ಪ್ರಯತ್ನದ ಮೂಲಕ ಯಶಸ್ಸಿನತ್ತ ಸಾಗಬೇಕು, ವಿದ್ಯಾರ್ಥಿಗಳಲ್ಲಿ  ಶಿಸ್ತು ಹಾಗೂ ನಾಯಕತ್ವದ ಗುಣಗಳನ್ನು ಬೆಳೆಸುವ ಅಗತ್ಯವಿದೆ ಎಂದು  ಹೇಳಿದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಕಾಲೇಜಿನ ಪ್ರಾಂಶುಪಾಲ ಪ್ರೊ. ಶ್ರೀಕೃಷ್ಣ ಗಣರಾಜ ಭಟ್ ಮಾತನಾಡಿ ಶುಭ  ಹಾರೈಸಿದರು.

ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿ 19 ಕರ್ನಾಟಕ ಬೆಟಾಲಿಯನ್ ಮಡಿಕೇರಿ ಇದರ  ಕಮಾಂಡಿಂಗ್   ಆಫೀಸರ್ ಕರ್ನಲ್ ಸಂಜೀವ್ ಕುಮಾರ್, ದೆಹಲಿಯಲ್ಲಿ ನಡೆದ ರಾಷ್ಟ್ರೀಯ
ಸೈನಿಕ ಶಿಬಿರದಲ್ಲಿ ಯಶಸ್ವಿಯಾಗಿ ಭಾಗವಹಿಸಿದ ಜೂನಿಯರ್ ಅಂಡರ್ ಆಫೀಸರ್ ಅಕ್ಷತಾ ಎ. ಇವರನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಎನ್‌ಸಿಸಿ ಅಧಿಕಾರಿ ಲೆಫ್ಟಿನೆಂಟ್ ಭಾಮಿ ಅಥುಲ್ ಶೆಣೈ ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ತೃತೀಯ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಸುಮ ಭಟ್ ಸ್ವಾಗತಿಸಿ,  ನಿರೂಪಿಸಿದರು.