Sunday, September 27, 2026
ಸುದ್ದಿ

ನರೇಂದ್ರ ಪ.ಪೂ. ಕಾಲೇಜಿನಲ್ಲಿ ವಂದೇ ಮಾತರಂ ಗೀತೆಯ ಸಾಮೂಹಿಕ ಗಾಯನ- ನಮಾಮಿ ಭಾರತಂ – ಕಹಳೆ ನ್ಯೂಸ್

ವಿದ್ಯಾಭಾರತಿ ಉಚ್ಚ ಶಿಕ್ಷಾ ಸಂಸ್ಥಾನ ಅಖಿಲ ಭಾರತೀಯ ಶಿಕ್ಷಾ ಸಂಸ್ಥಾನ್, ವಿದ್ಯಾಭಾರತಿ ಕರ್ನಾಟಕ ಇದರ ವತಿಯಿಂದ ಭಾರತದ ರಾಷ್ಟ್ರೀಯ ಗೀತೆ “ವಂದೇ ಮಾತರಂ” ಇದರ 150 ನೇ ವರ್ಷಾಚರಣೆ ಪ್ರಯುಕ್ತ ದೇಶದಾದ್ಯಂತ ಏಕಕಾಲದಲ್ಲಿ ಸಂಪೂರ್ಣ ವಂದೇ ಮಾತರಂ ಗೀತೆಯ ಸಾಮೂಹಿಕ ಗಾಯನ ” ನಮಾಮಿ ಭಾರತಂ” ಎಂಬ ಬೃಹತ್ ಅಭಿಯಾನವನ್ನು ಏಕ ಸ್ವರ, ಏಕ ಸಂಕಲ್ಪ ಮತ್ತು ಏಕ ಭಾರತ ಎಂಬ ಸಂಕಲ್ಪದೊಂದಿಗೆ ನಡೆಸಲಾಯಿತು.

ಜಾಹೀರಾತು

ನರೇಂದ್ರ ಪ.ಪೂ. ಕಾಲೇಜಿನಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು(ರಿ.) ಇದರ ಸಹಾಯಕ ಕಾರ್ಯನಿರ್ವಹಣಾಧಿಕಾರಿಗಳಾದ ವೆಂಕಟ್ರಮಣ ರಾವ್ ಮಂಕುಡೆ ಇವರು ಮಾತನಾಡುತ್ತಾ ಶಕ್ತಿ, ಸಮೃದ್ಧಿ ಮತ್ತು ದೈವತ್ವದ ಸಾಕಾರ ರೂಪವಾಗಿ ಮಾತೃಭೂಮಿಯನ್ನು ಪ್ರಾರ್ಥಿಸುವ ಈ ಹಾಡು, ಭಾರತದ ಏಕತೆ ಮತ್ತು ಸ್ವಾಭಿಮಾನದ ಜಾಗೃತಿ ಮನೋಭಾವಕ್ಕೆ ಕಾವ್ಯಾತ್ಮಕ ಅಭಿವ್ಯಕ್ತಿಯನ್ನು ನೀಡಿದೆ ಮತ್ತು ರಾಷ್ಟ್ರದ ಭಕ್ತಿಯ ಶಾಶ್ವತ ಸಂಕೇತವಾಗಿದೆ. ಎಂದು ಹೇಳಿದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು(ರಿ.) ಇದರ ಸಹಾಯಕ ಕಾರ್ಯನಿರ್ವಹಣಾಧಿಕಾರಿಗಳಾದ ವೆಂಕಟ್ರಮಣ ರಾವ್ ಮಂಕುಡೆ ,ಕಾಲೇಜಿನ ಸಂಚಾಲಕರಾದ ಸಂತೋಷ ಬಿ. ಪ್ರಾಂಶುಪಾಲರಾದ ಪ್ರಸಾದ್ ಶ್ಯಾನಭಾಗ್ , ಎಲ್ಲಾ ಉಪನ್ಯಾಸಕರು, ಸಿಬ್ಬಂದಿ ವರ್ಗದವರು ಮತ್ತು ವಿದ್ಯಾರ್ಥಿಗಳು ಏಕಕಾಲದಲ್ಲಿ ಸಂಪೂರ್ಣ ವಂದೇ ಮಾತರಂ ಗೀತೆಯನ್ನು ರಾಷ್ಟ್ರ ಭಕ್ತಿ , ರಾಷ್ಟ್ರ ಪ್ರೇಮ ಮತ್ತು ರಾಷ್ಟ್ರ ರಕ್ಷಣೆಯ ಸಂಕಲ್ಪದೊಂದಿಗೆ ಹಾಡಿದರು.